Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಘೋಷಿಸಿದ್ದ ಹಣ ಬಿಡುಗಡೆ ಮಾಡಲಿ : ಸಚಿವ ಡಿ.ಸುಧಾಕರ್ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 22 : ಭದ್ರಾಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿರುವ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ತಕ್ಷಣವೆ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ 28 ಸಂಸದರು ಪಕ್ಷಾತೀತವಾಗಿ ಕೇಂದ್ರಕ್ಕೆ ನಿಯೋಗ ಹೋಗಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳ ಬಿಡುಗಡೆಗೆ ಒತ್ತಡ ಹೇರಬೇಕು. ರಾಜ್ಯದ ಜನ ನಾಲ್ಕುವರೆ ಲಕ್ಷ ಕೋಟಿ ರೂ.ಗಳ ತೆರಿಗೆ ಕಟ್ಟುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ವಿಳಂಬ ಮಾಡದೆ ಹಣ ಬಿಡುಗಡೆಗೆ ಮುಂದಾಗಬೇಕೆಂದರು.

ಗುರುವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಿರಿಯೂರಿಗೆ ಆಗಮಿಸಿ ವಾಣಿವಿಲಾಸಸಾಗರಕ್ಕೆ ಬಾಗಿನ ಅರ್ಪಿಸುವರು. 113 ವರ್ಷಗಳ ಇತಿಹಾಸದಲ್ಲಿ ವಿ.ವಿ.ಸಾಗರ ಮೂರನೆ ಬಾರಿಗೆ ಕೋಡಿ ಬಿದ್ದಿದೆ. ತುಮಕೂರು ಬ್ರಾಂಚ್ ಕೆನಾಲ್ ಅಡೆತಡೆ ನಿವಾರಣೆಯಾಗಿದ್ದು, ಮುಂದಿನ ಒಂದು ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸಲು ವಿಶ್ವೇಶ್ವರಯ್ಯ ಜಲ ನಿಗಮ ಗುರಿಯಿಟ್ಟುಕೊಂಡಿದೆ. ವಿಧಾನಸಭೆ ಚುನಾವಣಾ ಪೂರ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದಂತೆ ಉಚಿತ ಐದು ಗ್ಯಾರೆಂಟಿಗಳನ್ನು ಕೊಟ್ಟು ನುಡಿದಂತೆ ನಡೆದಿದ್ದಾರೆಂದರು.

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಮಧ್ಯ ಕರ್ನಾಟಕ ಬಯಲುಸೀಮೆ ಬರಗಾಲಕ್ಕೆ ತುತ್ತಾಗಿದೆ. ಇಲ್ಲಿ ಯಾವುದೇ ನೀರಾವರಿ, ಕೈಗಾರಿಕೆಗಳ ಸೌಲಭ್ಯಗಳಿಲ್ಲ.
ಅಪ್ಪರ್ ಭದ್ರಾ ಯೋಜನೆಗಾಗಿ ಕಾಲುವೆ ತೋಡಲಾಗುತ್ತಿದೆ. ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿದಂತೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ ಜಿಲ್ಲೆಗೆ ನೀರು ಹರಿಯಲು ಸಹಕರಿಸಬೇಕೆಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷ ಉಚಿತ ಐದು ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದೆ. ಬಡವರು, ದುರ್ಬಲರು, ಅಸಹಾಯಕರು ಜೀವಿಸುತ್ತಿರುವ ಜಿಲ್ಲೆಯ ಬಗ್ಗೆ ಬಿಜೆಪಿ.ಯವರಿಗೆ ಕಾಳಜಿಯಿಲ್ಲ. ಸಮಯ ಬಂದರೆ ಕೇಂದ್ರ ಸರ್ಕಾರದ ವಿರುದ್ದ ಹೋರಾಟ, ಚಳುವಳಿ ನಡೆಸಬೇಕಾಗುತ್ತದೆಂದು ಹೆಚ್.ಆಂಜನೇಯ ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ,
ಅಂಜಿನಪ್ಪ, ಮುದಸಿರ್ ನವಾಜ್, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರ್ಪಿತ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...