Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಕ ವ್ಯಸನಮುಕ್ತ ಸಮಾಜಕ್ಕೆ ಯುವಜನತೆ ಕಂಕಣಬದ್ಧರಾಗಲಿ : ಎಸ್ಪಿ ರಂಜಿತ್ ಕುಮಾರ್ ಬಂಡಾರು

---Advertisement---

ಚಿತ್ರದುರ್ಗ. ಮಾರ್ಚ್01: ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಕರೆ ನೀಡಿದರು.

ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಭಾನುವಾರ ಜಿಲ್ಲಾ ಪೆÇಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಜಾಗೃತ ರನ್ 2.0” 5 ಕಿ.ಮೀ ಮ್ಯಾರಥಾನ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

 

ಇಂದಿನ ವೇಗದ ಬದುಕಿನಲ್ಲಿ ದೈಹಿಕ ವ್ಯಾಯಾಮ, ಓಟ, ನಡಿಗೆ ಮತ್ತು ಯೋಗದಂತಹ ಚಟುವಟಿಕೆಗಳು ಅತ್ಯಗತ್ಯ. ಯುವಜನತೆ ಇವುಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮಾನಸಿಕ ಮತ್ತು ದೈಹಿಕವಾಗಿ ಸಬಲರಾಗಬೇಕು. ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಹೊಂದುವಂತೆ ಕಿವಿಮಾತು ಹೇಳಿದರು.

 

ಮ್ಯಾರಥಾನ್ ಕಾರ್ಯಕ್ರಮದ ಪುರುಷರ ವಿಭಾಗದಲ್ಲಿ ಮೊದಲನೇ ಸ್ಥಾನವನ್ನು ಡಿ.ಬೋರಪ್ಪ ಕಾಲೇಜಿನ ವಿದ್ಯಾರ್ಥಿ ಸಚಿನ್ ಪಡೆದರು. ಡಾನ್ ಬಾಸ್ಕೋ ಶಾಲೆಯ ವಿದ್ಯಾರ್ಥಿ ಜೋಶ್ಯಾ ದ್ವಿತೀಯ ಸ್ಥಾನ ಹಾಗೂ ವಿದ್ಯಾವಿಕಾಸ ಶಾಲೆಯ ಸಮೃದ್ ತೃತೀಯ ಸ್ಥಾನ ಪಡೆದರು. ಅದೇ ರೀತಿಯಾಗಿ ಮಹಿಳಾ ವಿಭಾಗದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಟಿ.ಐಸಿರಿ ಪ್ರಥಮ ಸ್ಥಾನ, ಡಾನ್ ಬಾಸ್ಕೋ ಕಾಲೇಜಿನ ವಿದ್ಯಾರ್ಥಿನಿ ಎಸ್.ಪ್ರತೀಕ್ಷಾ ದ್ವಿತೀಯ ಸ್ಥಾನ ಹಾಗೂ ಡಾನ್ ಬಾಸ್ಕೋ ಶಾಲೆಯ ವಿದ್ಯಾರ್ಥಿನಿ ಶಿರಿಷಾ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.

 

ಚಿತ್ರದುರ್ಗ ನಗರದ ಡಿಎಆರ್ ಮೈದಾನದಿಂದ ಪ್ರಾರಂಭವಾದ ಮ್ಯಾರಥಾನ್ ವಾಸವಿ ಲ್ಯಾಬ್ ಮುಂಭಾಗದಿಂದ ಬಿ.ಡಿ.ರಸ್ತೆಯ ಮೂಲಕ ಚಳ್ಳಕೆರೆ ಸರ್ಕಲ್, ಮದಕರಿ ಸರ್ಕಲ್, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಹೆಡ್ ಪೋಸ್ಟ್ ಆಫೀಸ್ ಹತ್ತಿರ ಗಾಂಧಿವೃತ್ತ, ಪ್ರವಾಸಿ ಮಂದಿರದ ಹತ್ತಿರ ಎಡಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಮೂಲಕ ಪುನಃ ಡಿಎಆರ್ ಮೈದಾನದಲ್ಲಿ ಅಂತ್ಯಗೊಂಡಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಐಮಂಗಲ ಪೊಲೀಸ್ ತರಬೇತಿಯ ಶಾಲೆಯ ಪ್ರಾಂಶುಪಾಲರು ಸುಮಾರು 700ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
=============

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...