ಕಡ್ಡಾಯವಾಗಿ ಹೆಲ್ಮೆಟ್ ಅನುಷ್ಠಾನವಾಗಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಚಿತ್ರದುರ್ಗ, (ಮಾರ್ಚ್.30) : ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಘಾತಗಳ ಸಂಖ್ಯೆಯನ್ನು ಇಳಿಮುಖ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಇನ್ನೂ ಹೆಚ್ಚಿನದಾಗಿ ಅಪಘಾತ ವಲಯಗಳನ್ನು ಗುರುತಿಸಿ, ತಿಂಗಳೊಳಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಹೊಸಪೇಟೆ, ದಾವಣಗೆರೆ, ಬೆಂಗಳೂರು, ಮೊಳಕಾಲ್ಮುರು ಹಾಗೂ ಶಿವಮೊಗ್ಗ ಹೆದ್ದಾರಿಗಳಲ್ಲಿ ಅಪಘಾತ ವಲಯಗಳನ್ನು ಗುರುತಿಸಲು ಪೋಲಿಸ್ ಇಲಾಖೆಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಸಾರಿಗೆ ಇಲಾಖೆ ಹಿರಿಯ ಮೋಟಾರು ನಿರೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕರನ್ನೊಳಗೊಂಡಂತೆ ಒಂದು ತಂಡವನ್ನು ರಚಸಿಕೊಂಡು ಅಪಘಾತ ವಲಯಗಳನ್ನು ಗುರುತಿಸಿ ವರದಿ ನೀಡುವಂತೆ ಸೂಚಿಸಿದರು.

ಅಪಘಾತಗಳಿಂದ ಅಮೂಲ್ಯವಾದ ಜೀವ ಹೋಗಬಾರದು. ಇದರಿಂದ ಕುಟುಂಬಕ್ಕೂ ದೊಡ್ಡ ನಷ್ಟವಾಗಲಿದೆ. ಅಪಘಾತ ವಲಯಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಡ್ಡಾಯವಾಗಿ ಹೆಲ್ಮೆಟ್ ಅನುಷ್ಠಾನವಾಗಲಿ: ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಅನುಷ್ಠಾನ ಕಡ್ಡಾಯವಾಗಲಿ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಹೆಲ್ಮೆಟ್ ಅನುಷ್ಠಾನವಾಗುತ್ತಿಲ್ಲ. ಸಾರಿಗೆ ಇಲಾಖೆ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಜಂಟಿಯಾಗಿ ತಪಾಸಣೆ ನಡೆಸಬೇಕು ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಬಾಲಕೃಷ್ಣ ಮಾತನಾಡಿ, ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಬೇಕಾಗಿದೆ. ಅಪಘಾತ ವಲಯಗಳನ್ನು ಗುರುತಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರನ್ನು ತಡೆಗಟ್ಟಲು ಪೋಲಿಸ್ ಇಲಾಖೆಯವರು ಹೆಚ್ಚಿನ ತಪಾಸಣೆಗೊಳಪಡಿಸಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಟ್ರ್ಯಾಕ್ಟರ್-ಟ್ರೇಲರ್‍ಗಳಿಗೆ ರಿಪ್ಲೇಕ್ಲಟರ್‍ಗಳನ್ನು ಅಳವಡಿಸಲಾಗುತ್ತಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಕಾರ್ಯಾಗಾರ ಹಮ್ಮಿಕೊಂಡು ಟ್ರ್ಯಾಕ್ಟರ್-ಟ್ರೇಲರ್‍ಗಳಿಗೆ ರಿಪ್ಲಕ್ಟರ್ ಅಳವಡಿಸಲು ಅನುದಾನ ಬಿಡುಗಡೆಗೆ ರಾಜ್ಯ ರಸ್ತೆ ಸುರಕ್ಷತಾ ಸಮಿತಿಗೆ ಪತ್ರ ಬರೆಯಲಾಗಿದೆ. ಕಚೇರಿ ವತಿಯಿಂದ ಹೊಳಲ್ಕೆರೆ ಹಾಗೂ ಹೊಸದುರ್ಗದ 150ಕ್ಕೂ ಹೆಚ್ಚು ಟ್ರ್ಯಾಕ್ಟರ್-ಟ್ರೇಲರ್‍ಗಳಿಗೆ ರಿಪ್ಲಕ್ಟರ್ ಅಳವಡಿಸಲಾಗಿದೆ ಎಂದರು. ರಾಜ್ಯ ರಸ್ತೆ ಸುರಕ್ಷತಾ ಸಮಿತಿಯು ಅನುದಾನ ಬಿಡುಗಡೆ ಮಾಡದಿದ್ದರೆ ಸಿಎಸ್‍ಆರ್ ನಿಧಿಯಿಂದ ರಿಪ್ಲಕ್ಟರ್ ಅಳವಡಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಪರಶುರಾಮ ಮಾತನಾಡಿ, ಹೆಚ್ಚು ಅಪಘಾತ ಸಂಭವಿಸುವ ಅಪಘಾತ ವಲಯಗಳಲ್ಲಿ ಥರ್ಮಲ್‍ಪ್ಲಾಸ್ಟ್ ಬಣ್ಣ ಬಳಿಯುವಿಕೆ, ಕ್ಯಾಟಐಸ್ ಅಳವಡಿಕೆ, ರಂಬಲ್‍ಸ್ಟ್ರೀಟ್, ಪೇಟಿಂಗ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಹಾಗಾಗಿ ಅಪಘಾತಗಳನ್ನು ಇಳಿಮುಖಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ  ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸತೀಶ್‍ಬಾಬು ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago