Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜೃಂಭಣೆಯಿಂದ ಒನಕೆ ಓಬವ್ವ ಜಯಂತಿ ಆಚರಿಸೋಣ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Facebook
Twitter
Telegram
WhatsApp

ಚಿತ್ರದುರ್ಗ. ನ.07: ಜಿಲ್ಲಾಡಳಿತದ ವತಿಯಿಂದ ಇದೇ ನವೆಂಬರ್ 11ರಂದು ಜಿಲ್ಲಾ ಕೇಂದ್ರದಲ್ಲಿ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಒನಕೆ ಓಬವ್ವ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒನಕೆ ಓಬವ್ವ ಜಯಂತಿ ಅಂಗವಾಗಿ ನವೆಂಬರ್ 11ರಂದು ಬೆಳಿಗ್ಗೆ 9ಕ್ಕೆ ಐತಿಹಾಸಿಕ ಕೋಟೆ ಮುಂಭಾಗದಿಂದ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ಪ್ರಾರಂಭವಾಗಿ ಆನೆಬಾಗಿಲು ಮೂಲಕ, ಗಾಂಧಿವೃತ್ತ, ಒನಕೆ ಓಬವ್ವ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ.

ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಎಲ್ಲ ಸಮಾಜದವರು ಪಾಲ್ಗೊಳ್ಳಬೇಕು ಎಂದರು.

ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಆಹ್ವಾನಿಸಲಾಗುವುದು. ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ಗೀತಗಾಯನ ಕಾರ್ಯಕ್ರಮ ಆಯೋಜಿಲಾಗುವುದು. ಜಯಂತಿ ಅಂಗವಾಗಿ ಎಲ್ಲ ಪ್ರತಿಮೆಗಳಿಗೆ ಅಲಂಕಾರ ಮಾಡಬೇಕು. ಒಂದು ದಿನ ಮುಂಚಿತವಾಗಿ ಒನಕೆ ಓಬವ್ವ ಪ್ರತಿಮೆಗೆ ವಿದ್ಯುತ್ ಅಲಂಕಾರ ಹಾಗೂ ಪುಷ್ಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಂತಿ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಮಹಿಳೆಯರಿಂದ ಪೂರ್ಣಕುಂಭ ಮೆರವಣಿಗೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಛಲವಾದಿ ಮಹಾಸಂಸ್ಥಾನ ಗುರಪೀಠ ಟ್ರಸ್ಟ್‌ನ ಬಸವ ನಾಗಿದೇವ ಸ್ವಾಮೀಜಿ ಮಾತನಾಡಿ,  ಜಿಲ್ಲಾಡಳಿತದ ವತಿಯಿಂದ ಒನಕೆ ಓಬವ್ವ ಜಯಂತಿ ಆಚರಣೆಯ ನಂತರ ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜಿಸುವ ಚಿಂತನೆ ಇದೆ ಎಂದು ತಿಳಿಸಿದ ಅವರು, ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಸಾಧನೆ ತೋರಿದ ಮಹಿಳೆಯರನ್ನು ಜಾತ್ಯಾತೀತವಾಗಿ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.
ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾವಿಷಯಕ ಪರಿಷತ್ ಸದಸ್ಯೆ ಎನ್.ಬಿ.ಭಾರ್ಗವಿ ದ್ರಾವಿಡ್ ಮಾತನಾಡಿ, ಇಂದಿನ ಯುವ ಜನತೆಗೆ ಇತಿಹಾಸ ತಿಳಿಸುವ ಕೆಲಸವಾಗಬೇಕಿದೆ. ಕಾಲೇಜು ವಿದ್ಯಾರ್ಥಿಗಳನ್ನು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅಗತ್ಯಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಛಲವಾದಿ ಸಮಾಜದ ಮುಖಂಡರಾದ ಹೆಚ್.ಸಿ.ನಿರಂಜನಮೂರ್ತಿ, ಹೆಚ್.ಶೇಷಣ್ಣ, ಎಸ್.ವಿ.ಗುರುಮೂರ್ತಿ, ಹೆಚ್.ಹಾಲಪ್ಪಸ್ವಾಮಿ, ಎಸ್.ಎನ್.ರವಿಕುಮಾರ್, ತಿಪ್ಪೇಸ್ವಾಮಿ, ಕೆ.ಸಿ.ಜಗದೀಶ್, ಅಣ್ಣಪ್ಪಸ್ವಾಮಿ, ಜಯರಾಮ್, ನವೀನ್, ಕಣಿವೆ ಮಾರಮ್ಮ ಸಂಘದ ತಿಪ್ಪೇಸ್ವಾಮಿ, ನಾಯಕ ಸಮಾಜದ ಸುರೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!