ಅಶ್ವಿನಿ ಪುನೀತ್ ರಾಜ್ ಕುಮಾರ್ ಪತ್ರ : ಅಂದು ಕೊಟ್ಟ ಸಹಕಾರಕ್ಕೆ ಧನ್ಯವಾದ

1 Min Read

ಬೆಂಗಳೂರು: ಅಂದು ಪುನೀತ್ ನಿಧನ ಅಂತ ಕೇಳಿ ಅದೆಷ್ಟೋ ಹೃದಯಗಳು ನಿಂತಂತೆ ಆಗಿತ್ತು. ನಮ್ಮ ಅಪ್ಪುಗೆ ಏನಾಯ್ತಪ್ಪ ಅನ್ನೋ ಆಘಾತವಾಗಿತ್ತು. ಆಸ್ಪತ್ರೆಯಿಂದ ಮತ್ತೆ ಬಂದೇ ಬರ್ತಾರೆ ಅನ್ನೋ ಅಪಾರ ಭರವಸೆ ಅರೆಕ್ಷಣದಲ್ಲೆ ಮಾಯವಾಗಿತ್ತು. ಅಪ್ಪು ಕಡೆಗೂ ಎಲ್ಲರನ್ನ ಬಿಟ್ಟು ಮತ್ತೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದರು. ಅದನ್ನ ಕರುನಾಡ ಜನತೆ ಈಗಲೂ ಒಪ್ಪಿಕೊಳ್ಳೋದಕ್ಕೆ ಆಗ್ತಾ ಇಲ್ಲ.

ಆದ್ರೆ ಅಂದು ಪೊಲೀಸರು ಕೊಟ್ಟ ಭದ್ರತೆ, ಜನರ ಸಹಕಾರ ಉತ್ತಮವಾಗಿತ್ತು. ಸುಮಾರು 25 ಲಕ್ಷ ಮಂದಿ ಅಂತಿಮ ದರ್ಶನ ಪಡೆದರು. ಯಾವುದೇ ಸಣ್ಣ ಸಮಸ್ಯೆಯೂ ಕೂಡ ಆಗಿಲ್ಲ. ಅಷ್ಟು ಅಚ್ಚುಕಟ್ಟಾಗಿ ಸರ್ಕಾರದಿಂದ ವ್ಯವಸ್ಥೆ ಮಾಡಲಾಗಿತ್ತು. ಅದಕ್ಕೆ ಅಪ್ಪು ಪತ್ನಿ ಅಶ್ವಿನಿ ಅವರು ಗೃಹ ಸಚಿವರಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.

ಪುನೀತ್ ರಾಜ್‍ಕುಮಾರ್ ಆಗಲಿಕೆ ನಮಗಷ್ಟೇ ಅಲ್ಲದೇ ಇಡೀ ರಾಜ್ಯಕ್ಕೆ ಆಘಾತಕಾರಿ ವಿಷಯ. ಅವರು ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ನಮ್ಮ ನೋವನ್ನು ಅಡಗಿಟ್ಟಿಸಿಕೊಂಡು ಅವರ ಸಕಲ ಗೌರವಗಳೊಂದಿಗೆ ಕಳುಹಿಸಿಕೊಡುವುದು ಅನಿವಾರ್ಯತೆಯಾಗಿತ್ತು. ಇಂತಹ ಸಂದರ್ಭದಲ್ಲಿ ಗೃಹಮಂತ್ರಿಗಳಾದ ತಾವು ನಮಗೆ ಬೆಂಬಲವಾಗಿ ನಿಂತಿದ್ದೀರಿ‌. ಲಕ್ಷಾಂತರ ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದಷ್ಟೇ ಅಲ್ಲದೇ ಅಂತ್ಯ ಸಂಸ್ಕಾರ ಸಂಪೂರ್ಣವಾಗುವವರೆಗೂ ಜೊತೆಗಿದ್ದು ಧೈರ್ಯ ನೀಡಿದ್ದೀರಿ. ಮೂರು ದಿನಗಳ ಕಾಲ ಯಾವುದೇ ಅಹಿತಕರ ಘಟನೆ ನಡೆಯದಂತೆ ನೀವು ಕೈಗೊಂಡ ಕ್ರಮಗಳಿಂದ ನಾವು ಅವರಿಗೊಂದು ಸೂಕ್ತವಾದ ವಿದಾಯ ಹೇಳಲು ಸಾಧ್ಯವಾಗಿದೆ. ನಿಮ್ಮ ಈ ಸಹಕಾರಕ್ಕೆ ನಮ್ಮ ಇಡೀ ಕುಟುಂಬ ಮತ್ತು ಎಲ್ಲಾ ಅಭಿಮಾನಿಗಳ ಪರವಾಗಿ ಹೃತ್ಪೂರ್ಪಕ ಕೃತಜ್ಞತೆಗಳು ಎಂದು ಅಶ್ವಿನಿ ಪುನೀತ್ ರಾಜ್‍ಕುಮಾರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *