Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೊಲೀಸ್ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯರಿಗೆ ಪತ್ರ : ಖಡಕ್ಕಾಗಿ ಮಾಡಿದ ಮನವಿ ಏನು..?

---Advertisement---

ಬೆಂಗಳೂರು; ಆರ್ಸಿಬಿ ಸಂಭ್ರಮಾಚರಣೆ ವೇಳೆ ಹಲವು ಸಾವು ನೋವುಗಳು ಸಂಭ್ರಮಿಸಿದ ಬೆನ್ನಲ್ಲೇ ಸರ್ಕಾರ ನೇರವಾಗಿ ಪೊಲೀಸ್ ಇಲಾಖೆಯನ್ನ ಗುರಿಯಾಗಿಸಿತ್ತು. ಅಷ್ಟೇ ಅಲ್ಲ ಕಮಿಷನರ್ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದು ಸಾರ್ವಜನಿಕ ವಲಯದಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ದಯಾನಂದ್ ಅವರ ಪರವಾಗಿ ಅಭಿಯಾನ ಕೂಡ ಶುರುವಾಗಿತ್ತು. ಇದೀಗ ಪೊಲೀಸ್ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ.

ಆ ಪತ್ರದಲ್ಲಿ ಮೊದಲು ಅಮಾನತುಗೊಳಿಸಿದವರನ್ನು ಕೆಲಸಕ್ಕೆ ಬರುವಂತೆ ಮಾಡಿ. ತನಿಖೆಯನ್ನೇಗೋ ನಡೆಸುತ್ತಿದ್ದೀರಿ. ಅದರಲ್ಲಿ ತಪ್ಪಿತಸ್ಥರೆಂದು ಗೊತ್ತಾದ ಮೇಲೆ ಶಿಕ್ಷೆ ನೀಡಿ ಎಂದು ಖಡಕ್ ಆಗಿಯೇ ಮನವಿ ಮಾಡಿದ್ದಾರೆ. ಕಾಲ್ತುಳಿತ ವಿಚಾರ ತಿಳಿದು ದುಃಖಿತರಾಗಿದ್ದೇವೆ. ಈ ಕಾಲ್ತುಳಿತದಲ್ಲಿ ಅನೇಕ ಅಮೂಲ್ಯ ಜೀವಗಳು ಬಲಿಯಾಗಿವೆ. ಕಾಲ್ತುಳಿತ ದುರಂತ ಪ್ರಜರಣವನ್ನು ಭಾರತೀಯ ಪೊಲೀಸ್ ಒಕ್ಕೂಟ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದಿದೆ.

 

ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ. ಕರ್ನಾಟಕ ಸರ್ಕಾರವು ಘಟನೆಯ ಬಗ್ಗೆ ನಿಷ್ಪಕ್ಷಪಾತ ನ್ಯಾಯಾಂಗ ತನಿಖೆಗೆ ಆದೇಶಿಸಿದೆ ಎಂದು ತಿಳಿದು ನಮಗೆ ಸಂತೋಷವಾಗಿದೆ. ಆದಾಗ್ಯೂ, ವಿವರವಾದ ತನಿಖೆ ಪೂರ್ಣಗೊಳ್ಳುವ ಮೊದಲೇ ಪೊಲೀಸ್ ಆಯುಕ್ತರು ಸೇರಿದಂತೆ ಐದು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ದೇಶಾದ್ಯಂತ ವೃತ್ತಿಪರ ಪೊಲೀಸ್ ಸಮುದಾಯದಲ್ಲಿ ಗಂಭೀರ ಕಳವಳವನ್ನು ಹುಟ್ಟುಹಾಕಿದೆ. ಇತರ ಪಾಲುದಾರರು ಪರಿಶೀಲನೆಯಿಂದ ತಪ್ಪಿಸಿಕೊಳ್ಳುವಾಗ, ಪೊಲೀಸರನ್ನು ಶಿಕ್ಷಾರ್ಹ ಕ್ರಮಕ್ಕಾಗಿ ಪ್ರತ್ಯೇಕಿಸುವುದು, ಹಂಚಿಕೆಯ ಜವಾಬ್ದಾರಿಯ ವಾಸ್ತವತೆಯನ್ನು ವಿರೂಪಗೊಳಿಸುತ್ತದೆ ಮತ್ತು ಭವಿಷ್ಯಕ್ಕಾಗಿ ಸಮಗ್ರ ಪಾಠಗಳನ್ನು ಕಲಿಯುವ ಅವಕಾಶವನ್ನು ಕಳೆದುಕೊಳ್ಳುತ್ತದೆ. ವಿಚಾರಣೆ ಮುಗಿಯುವ ತನಕ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳನ್ನ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment