Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡದಂತೆ ಚಿಕ್ಕಮಗಳೂರಿನಲ್ಲಿ ಪತ್ರ ಚಳುವಳಿ..!

---Advertisement---

 

 

 

ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಬರದ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಸಂಚಾರ ನಡೆಸುತ್ತಿವೆ. ಟಿಕೆಟ್ ಆಕಾಂಕ್ಷಿಗಳು ಕೂಡ ಜಾಸ್ತಿಯಾಗಿದ್ದಾರೆ. ಈ ಬೆನ್ನಲ್ಲೇ ಚಿಕ್ಕಮಗಳೂರು ಜನತೆ ಈ ಬಾರಿ ಶೋಭಾ ಕರಂದ್ಲಾಜೆಯವರ ಸ್ಪರ್ಧೆಯನ್ನು ನಿರಾಕರಣೆ ಮಾಡಿದ್ದಾರೆ. ಈ ಸಂಬಂಧ ಪತ್ರ ಚಳುವಳಿ ಶುರು ಮಾಡಿದ್ದಾರೆ.

 

‘ಮಾನ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ನಾವೂ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರು. ಈ ಕ್ಷೇತ್ರದಲ್ಲಿ ಕುಮಾರಿ ಶೋಭಾ ಕರಂದ್ಲಾಜೆ ಅವರು ಲೋಕಸಭಾ ಸದಸ್ಯರಾಗಿರುತ್ತಾರೆ. ಇಲ್ಲಿಯವರೆಗೂ ಎರಡು ಬಾರಿ ಗೆಲ್ಲಿಸಿದ್ದೇವೆ. ಎರಡು ಬಾರಿ ಸದಸ್ಯರಾಗಿದ್ದಾರೆ. ಈ ಬಾರಿ ನಮ್ಮ ಕ್ಷೇತ್ರದಿಂದ ಅವರಿಗೆ ಟಿಕೆಟ್ ಕೊಡಬಾರದೆಂದು ಮನವಿ ಮಾಡುತ್ತಿದ್ದೇವೆ. ನೊಂದ ಕಾರ್ಯಕರ್ತ ಎಂದು ಪತ್ರದಲ್ಲಿ ಬರೆದಿದ್ದಾರೆ. ಈ ಪತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

 

ಇನ್ನು ಪತ್ರಗಳನ್ನು ಹಂಚುತ್ತಿರುವ ಕಾರ್ಯಕರ್ತರು, ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ಹಾಗೂ ಅಮಿತ್ ಶಾ ಅವರಿಗೆ ಈ ಪತ್ರಗಳನ್ನು ತಲುಪಿಸಿದ್ದಾರೆ. ಹೊಸ ಮುಖಕ್ಕೆ ಟಿಕೆಟ್ ನೀಡಿ ಎಂದು ಮನವಿ ಮಾಡಿದ್ದಾರೆ. ಸದ್ಯ ಶೋಭಾ ಕರಂದ್ಲಾಜೆ ಅವರು ಕೇಂದ್ರ ಸಚಿವೆಯಾಗಿದ್ದಾರೆ. ಕ್ಷೇತ್ರದಲ್ಲಿ ಕಾಣಿಸಿಕೊಳ್ಳುವುದು ಕಡಿಮೆ ಎನ್ನಲಾಗುತ್ತಿದೆ. ಹೀಗಾಗಿ ಈ ಬಾರಿ ಬೇರೆ ಯಾರಿಗಾದರೂ ಟಿಕೆಟ್ ನೀಡಿ ಎಂದು ಜನರೇ ಮನವಿ ಮಾಡುತ್ತಿದ್ದಾರೆ. ಚುನಾವಣೆ ಎಂದರೆ ಮತದಾರರೇ ಅಂತಿಮವಾಗುತ್ತಾರೆ. ಹೀಗಾಗಿ ಅವರ ಅಭಿಪ್ರಾಯಗಳು ಬಹಳ ಮುಖ್ಯವಾಗುತ್ತವೆ‌. ಈಗ ಜನರೇ ಶೋಭಾ ಕರಂದ್ಲಾಜೆ ಅವರ ಸ್ಪರ್ಧೆ ಬೇಡ ಎನ್ನುತ್ತಿದ್ದಾರೆ. ಇದರ ಕಡೆಗೆ ಹೈಕಮಾಂಡ್ ಗಮನ ಕೊಡುತ್ತದಾ ಎಂಬುದನ್ನು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...