Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಕ ವಸ್ತುಗಳ ಸೇವನೆಯಿಂದ ಜೀವನ ಹಾಳು : ಸಿಪಿಐ ಗುಡ್ಡಪ್ಪ

---Advertisement---

ಸುದ್ದಿಒನ್, ಹಿರಿಯೂರು, ಜೂನ್. 27 : ಮಾದಕ ವಸ್ತುಗಳ ಸೇವನೆಯಿಂದ ಸಮಾಜದಲ್ಲಿ ಗೌರವ ಕಳೆದುಕೊಳ್ಳುವುದಲ್ಲದೆ, ಜೀವನವೂ ಹಾಳಾಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು ಎಂದು ಐಮಂಗಲ ವೃತ್ತ ನಿರೀಕ್ಷಕ ಎನ್. ಗುಡ್ಡಪ್ಪ ಹೇಳಿದರು.

ತಾಲೂಕಿನ ಹರಿಯಬ್ಬೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮಾದಕ ವಸ್ತುಗಳ ಸೇವನೆ ವಿರುದ್ಧ ಜಾಗೃತಿ ಅಭಿಯಾನ ಮತ್ತು ಪ್ರಭಂದ ಸ್ಪರ್ಧೆ ಕಾರ್ಯಕ್ರಮ ಕುರಿತು ಮಾತನಾಡಿದರು.

ಮಾದಕ ವಸ್ತುಗಳ ವ್ಯಾಮೋಹದಿಂದ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ನಿರ್ದಿಷ್ಟ ಗುರಿ ಸಾಧಿಸವುದು ಕಠಿಣವಾಗುತ್ತಿದೆ. ಮನಸ್ಸಿನ ಮೇಲೆ ನಿಗ್ರಹ ಇರುವುದಿಲ್ಲ. ಚಟಕ್ಕೆ ಬಿದ್ದವರು ಮಾದಕ ವಸ್ತುಗಳನ್ನು ಖರೀದಿ ಮಾಡಬೇಕೆಂಬ ಉಮೇದಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲೂ ಭಾಗಿಯಾಗುವ ಅಪಾಯವಿರುತ್ತದೆ. ಇಂತಹ ವಸ್ತುಗಳಿಂದ ದೂರವಿದ್ದು, ಓದುವ ಕಡೆ ಗಮನ ಹರಿಸಬೇಕು ಎಂದು ತಿಳಿಸಿದರು. ಇದೇ ಪ್ರಬಂಧ ಸ್ಪರ್ಧೆಯಲ್ಲಿ ಬಿಎಂ. ದೇವಿಕಾ ಪ್ರಥಮ, ಅನುಷಾ, ದ್ವಿತೀಯ, ಸ್ವಾತಿ ತೃತೀಯ ಮತ್ತು ಸೌಂದರ್ಯ ನಾಲ್ಕನೇ ಹಾಗೂ ನವ್ಯ ಆರ್. ಮಸಿಯಮ್ಮ ಸಮಾಧಾನಕರ ಬಹುಮಾನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಉಪ ನಿರೀಕ್ಷಕರಾದ ಮಂಜುನಾಥ್, ಪ್ರಾಂಶುಪಾಲ ಶ್ರೀ ಕುಮಾರಯ್ಯ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment