Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಸಿದ್ದುಗೆ ಜೀವ ಬೆದರಿಕೆ : ಅಶ್ವತ್ಥ್ ನಾರಾಯಣ್ ಗೆ ಕೋರ್ಟ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ್ ವಿರುದ್ಧ ಎಫ್ಐಆರ್ ಹಾಕದಂತೆ ತಡೆ ನೀಡಿ, ಹೈಕೋರ್ಟ್ ಆದೇಶ ನೀಡಿದೆ.

ಚುನಾವಣೆಗೂ ಮುನ್ನ ಆ ಸಮಯದಲ್ಲಿ ಸಚಿವರಾಗಿದ್ದಂತ ಅಶ್ವತ್ಥ್ ನಾರಾಯಣ್ ಅವರು ಮಾತನಾಡುವಾಗ, ಟಿಪ್ಪು ಸುಲ್ತಾನ್ ನನ್ನು ಉರಿಗೌಡ, ನಂಜೇಗೌಡ ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಈ ಸಂಬಂಧ ದೂರು ದಾಖಲಾಗಿತ್ತು.

ಸರ್ಕಾರ ಬದಲಾದ ನಂತರ ಹೊಸ ದೂರು ನೀಡಲಾಗಿದೆ. ದುರುದ್ದೇಶ ಪೂರ್ವಕವಾಗಿ ಎಫ್ಐಆರ್ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಐಪಿಸಿ ಸೆಕ್ಷನ್153 ರಂತೆ ಅಪರಾಧವಾಗುವ ಅಂಶಗಳಿಲ್ಲ ಹೀಗಾಗಿ ಎಫ್​ಐಆರ್​ಗೆ ತಡೆ ನೀಡುವಂತೆ ಅಶ್ವತ್ಥ್ ನರಾಯಣ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದರು. ಇನ್ನು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲ, ಜಾಮೀನು ನೀಡಬಹುದಾದ ಪ್ರಕರಣವಾದ್ದರಿಂದ ತಡೆ ಬೇಡ ಎಂದು ವಾದಿಸಿದರು. ಈ ವಾದ ವಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠ ಎಫ್​ಐಆರ್​ಗೆ​ ತಡೆಯಾಜ್ಞೆ ನೀಡಿ ಆದೇಶಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!