Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಕರುನಾಡ ವಿಜಯಸೇನೆ ಕಾರ್ಯಕರ್ತರಿಂದ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.30 : ನಾಡಿನ ಹೆಸರಾಂತ ಸಾಹಿತಿಗಳು, ಪ್ರಗತಿಪರರು, ಚಿಂತಕರುಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿರುವುದಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತನೆಂದು ಗುರುತಿಸಿಕೊಂಡಿರುವ ದಾವಣಗೆರೆ ಮೂಲದ ಶಿವಾಜಿ ಜಾಧವ್‍ನನ್ನು ಸಿ.ಸಿ.ಬಿ. ಪೊಲೀಸರು ಬಂಧಿಸಿದ್ದು, ಕೂಲಂಕುಷ ತನಿಖೆ ನಡೆಸಿ ಕಾನೂನು ರೀತಿಯ ಕ್ರಮ ಜರುಗಿಸಬೇಕು. ಸರ್ಕಾರ ಮತ್ತು ನ್ಯಾಯಾಲಯ ಯಾವುದೆ ಕಾರಣಕ್ಕೂ ಜಾಮೀನು ನೀಡಬಾರದೆಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗದ ಹೆಸರಾಂತ ಸಾಹಿತಿ ಬಿ.ಎಲ್.ವೇಣು, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯ್ಕ, ಬಂಜಗೆರೆ ಜಯಪ್ರಕಾಶ್ ಇವರುಗಳಿಗೆ ನಿರಂತರ ಕೊಲೆ ಬೆದರಿಕೆ ಪತ್ರಗಳು ಬರುತ್ತಿದ್ದವು. ಈ ಹಿಂದೆ ಎಂ.ಎಂ.ಕಲ್ಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಇವರುಗಳಿಗೂ ಕೊಲೆ ಬೆದರಿಕೆ ಪತ್ರಗಳನ್ನು ಬರೆದು ಕೊನೆಗೆ ಇಬ್ಬರನ್ನು ಹತ್ಯೆಗೈಯಲಾಯಿತು. ಇಂತಹ ಘಟನೆಗಳು ಇನ್ನು ಮುಂದೆ ಮರುಕಳಿಸಬಾರದೆಂದರೆ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಅವಿನಾಶ್, ಜಗದೀಶ್, ನಾಗರಾಜ್‍ಮುತ್ತು, ಅಖಿಲೇಶ್, ವಿಶ್ವನಾರಾಯಣಮೂರ್ತಿ, ಸಾಯಿಕುಮಾರ್, ಮಣಿಕಂಠ ಇವರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment