Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ 2.87 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ, 8071 ಬ್ಯಾನರ್ ಗಳ ತೆರವು :  ದಿವ್ಯಪ್ರಭು ಜಿ.ಆರ್.ಜೆ.

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಮಾ.24) :ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿಯೇ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು, ಜಿಲ್ಲೆಯಲ್ಲಿ 2.87 ಲಕ್ಷ ರೂ. ಗಳ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ, ಅಲ್ಲದೆ ನಿಯಮ ಬಾಹಿರವಾಗಿ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಹಾಕಲಾಗಿದ್ದ ಬ್ಯಾನರ್‍ಗಳನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ದಿವ್ಯಪ್ರಭು ಜಿ.ಆರ್.ಜೆ. ಅವರು ತಿಳಿಸಿದ್ದಾರೆ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಶೀಘ್ರದಲ್ಲಿಯೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಇದಕ್ಕೂ ಪೂರ್ವದಲ್ಲಿಯೇ ಚುನಾವಣಾ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸಲು ಚೆಕ್‍ಪೋಸ್ಟ್‍ಗಳನ್ನು ತೆರೆದು, ತೀವ್ರ ನಿಗಾ ವಹಿಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಹಾಗೂ ಅಂತರರಾಜ್ಯ ಗಡಿ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ತೆರೆದು, ದಿನದ 24 ಗಂಟೆಯೂ ಚೆಕ್‍ಪೋಸ್ಟ್‍ಗಳಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸಲು ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ನಿಟ್ಟಿನಲ್ಲಿ ಅಕ್ರಮವಾಗಿ ನಗದು ಸಾಗಾಣಿಕೆ, ಮದ್ಯ ಸಾಗಾಣಿಕೆ ಅಲ್ಲದೆ ಸೀರೆ, ಕುಕ್ಕರ್ ಸೇರಿದಂತೆ ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.  ಜಿಲ್ಲೆಯ ಗಡಿ ಹಂಚಿಕೊಂಡಿರುವ ಇತರೆ ರಾಜ್ಯಗಳ ಪ್ರಮುಖ ಅಧಿಕಾರಿಗಳೊಂದಿಗೂ ಈಗಾಗಲೆ ಸಭೆಗಳನ್ನು ನಡೆಸಿ, ಅವರಿಂದಲೂ ತೀವ್ರ ನಿಗಾ ವಹಿಸಲು ಸಹಕರಿಸುವಂತೆ ತಿಳಿಸಲಾಗಿದೆ.

ಪೊಲೀಸ್, ಅಬಕಾರಿ, ಕಂದಾಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಅಕ್ರಮವಾಗಿ ಮದ್ಯ ಮತ್ತು ಮಾದಕಗಳ ಸಾಗಾಣಿಕೆ, ನಗದು ಸಾಗಾಣಿಕೆ, ಇತರೆ ಸಾಮಗ್ರಿಗಳ ಸಾಗಾಣಿಕೆ ಹಾಗೂ ದಾಸ್ತಾನು ಬಗ್ಗೆ ತೀವ್ರ ಕಟ್ಟೆಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 35 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿದ್ದು, ಈಗಾಗಲೆ ಮೊಳಕಾಲ್ಮೂರು ತಾಲ್ಲೂಕಿನ ಯದ್ದಲಬೊಮ್ಮನಹಟ್ಟಿ, ಕಣಕುಪ್ಪೆ, ಚಳ್ಳಕೆರೆ ತಾಲ್ಲೂಕಿನ ಜಾಜೂರು ಮತ್ತು ನಾಗಪ್ಪನಹಳ್ಳಿ ಗೇಟ್.  ಹಿರಿಯೂರು ತಾಲ್ಲೂಕಿನ ಮದ್ದಿಹಳ್ಳಿ, ಪಿ.ಡಿ. ಕೋಟೆ ಕ್ರಾಸ್ ಮತ್ತು ಗುಯಿಲಾಳು ಟೋಲ್ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಎಮ್ಮೆಹಟ್ಟಿ ಸೇರಿದಂತೆ ಒಟ್ಟು 08 ಚೆಕ್‍ಪೋಸ್ಟ್‍ಗಳು ಕಾರ್ಯಾರಂಭಗೊಂಡಿವೆ.

ಸಾರಿಗೆ ಇಲಾಖೆ ಅಧಿಕಾರಿಗಳು ಕೂಡ ಜಿಲ್ಲೆಯಾದ್ಯಂತ ಪ್ರಮುಖ ಹೆದ್ದಾರಿಗಳಲ್ಲಿ ವಾಹನಗಳ ತಪಾಸಣೆ ಕಾರ್ಯವನ್ನು ತೀವ್ರ ನಿಗಾ ವಹಿಸಿದ್ದು, ಕಳೆದ ಮಾ. 15 ರಿಂದ ಈವರೆಗೆ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ 81 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕಳೆದ ಮಾರ್ಚ್ 15 ರಿಂದ ಇದುವರೆಗೆ ಜಿಲ್ಲೆಯಲ್ಲಿ 2.57 ಲಕ್ಷ ರೂ. ಮೌಲ್ಯದ ಒಟ್ಟು 633.97 ಲೀ. ಅಕ್ರಮ ಮದ್ಯ ಹಾಗೂ 30500 ರೂ. ಅಂದಾಜು ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 85258 ರೂ. ಮೌಲ್ಯದ 224.51 ಲೀ. ಅಕ್ರಮ ಮದ್ಯ ಹಾಗೂ 15000 ರೂ. ಮೌಲ್ಯದ 0.514 ಕೆ.ಜಿ. ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.

ಉಳಿದಂತೆ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 73156 ರೂ. ಮೌಲ್ಯದ 171.99 ಲೀ. ಮದ್ಯ.  ಚಿತ್ರದುರ್ಗ ತಾಲ್ಲೂಕಿನಲ್ಲಿ 46823 ರೂ. ಮೌಲ್ಯದ 113.46 ಲೀ. ಮದ್ಯ ಹಾಗೂ 10500 ರೂ. ಮೌಲ್ಯದ 0.541 ಕೆ.ಜಿ. ಮಾದಕ.  ಹಿರಿಯೂರು ತಾಲ್ಲೂಕಿನಲ್ಲಿ 22493 ರೂ. ಮೌಲ್ಯದ 55.94 ಲೀ. ಮದ್ಯ ಹಾಗೂ 5000 ರೂ. ಮೌಲ್ಯದ 0.212 ಕೆ.ಜಿ. ಮಾದಕ.  ಹೊಸದುರ್ಗ ತಾಲ್ಲೂಕಿನಲ್ಲಿ 11253 ರೂ. ಮೌಲ್ಯದ 24.48 ಲೀ. ಮದ್ಯ.  ಹೊಳಲ್ಕೆರೆ ತಾಲ್ಲೂಕಿನಲ್ಲಿ 17991 ರೂ. ಮೌಲ್ಯದ 43.59 ಲೀ. ಮದ್ಯ ವಶಪಡಿಸಿಕೊಂಡು, ಅಕ್ರಮ ಚಟುವಟಿಕೆ ನಡೆಸಿದವರ ವಿರುದ್ಧ ಕಾನೂನು ರೀತ್ಯ ಕ್ರಮ ವಹಿಸಲಾಗಿದೆ.

ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ಅನುಮತಿ ಇಲ್ಲದೆ ಯಾವುದೇ ರೀತಿಯ ಬ್ಯಾನರ್ಸ್, ಗೋಡೆ ಬರಹ, ಪೋಸ್ಟ್‍ರ್‍ಗಳನ್ನು ಅಳವಡಿಸುವುದು ನಿಯಮಗಳಿಗೆ ವಿರುದ್ಧವಾಗಿದ್ದು, ಇಂತಹ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗುವುದು.  ಜಿಲ್ಲೆಯಲ್ಲಿ ಅಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇದ್ದಂತಹ 731 ಗೋಡೆ ಬರಹಗಳು, 3301 ಪೋಸ್ಟರ್‍ಗಳು, 1733 ಬ್ಯಾನರ್‍ಗಳು ಹಾಗೂ 1041 ಇತರೆ ಬಗೆಯ ಫಲಕಗಳು ಸೇರಿದಂತೆ ಒಟ್ಟು 6805 ಬ್ಯಾನರ್, ಪೋಸ್ಟರ್ ಇತ್ಯಾದಿಗಳನ್ನು ತೆರವುಗೊಳಿಸಲಾಗಿದೆ.  ಅದೇ ರೀತಿ ಅನುಮತಿ ರಹಿತವಾಗಿ ಖಾಸಗಿ ಸ್ಥಳಗಳಲ್ಲಿ ಅಳವಡಿಸಲಾಗಿದ್ದ 207 ಗೋಡೆ ಬರಹಗಳು, 537 ಪೋಸ್ಟರ್‍ಗಳು, 235 ಬ್ಯಾನರ್‍ಗಳು, 287 ಇತರೆ ಫಲಕಗಳನ್ನು ತೆರವುಗೊಳಿಸಲಾಗಿದೆ.  ಅಕ್ರಮವಾಗಿ ಸಾರ್ವಜನಿಕ ಹಾಗೂ ಖಾಸಗಿ ಸ್ಥಳಗಳಲ್ಲಿ ವಿರೂಪಗೊಳಿಸುವುದನ್ನು ಕೂಡ ಗಂಭೀರವಾಗಿ ಪರಿಗಣಿಸಲಾಗಿದ್ದು, ಇಂತಹ ಒಟ್ಟು 3500 ಪ್ರಕರಣಗಳಲ್ಲಿ ಬರಹಗಳನ್ನು ತೆರವುಗೊಳಿಸಲಾಗಿದೆ.

ಜಿಲ್ಲೆಯಲ್ಲಿ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಜರುಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.  ಯಾರೂ ಕೂಡ ಯಾವುದೇ ಅಕ್ರಮ ಮಾರ್ಗಗಳನ್ನು ಅನುಸರಿಸಬಾರದು, ಅಕ್ರಮ ಚಟುವಟಿಕೆಗಳಲ್ಲಿ ತೊಡಗಬಾರದು, ಎಲ್ಲ ನಿಯಮಗಳನ್ನು ಪಾಲಿಸುವ ಮೂಲಕ ನ್ಯಾಯ ಸಮ್ಮತ ಚುನಾವಣೆಗೆ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!