Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯ ಈ ಊರುಗಳಲ್ಲಿ ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

---Advertisement---

 

ಚಿತ್ರದುರ್ಗ, ಸೆ.21: ಜಿಲ್ಲೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ಪ್ರಮುಖ ಗಣಪತಿಗಳ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಗಣಪತಿ ವಿಸರ್ಜನೆ ನಡೆಯುವ ಸ್ಥಳಗಳ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ  ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶಿಸಿದ್ದಾರೆ.

ಪ್ರಮುಖ ಗಣೇಶ ವಿಸರ್ಜನೆಯ ದಿನಾಂಕಗಳ ವಿವರ ಇಂತಿದೆ. ಸೆ.24ರಂದು ಮೊಳಕಾಲ್ಮೂರು ಪಟ್ಟಣ, ಸೆ.26ರಂದು ಹೊಸದುರ್ಗ ಪಟ್ಟಣ, ಸೆ.27ರಂದು ಭರಮಸಾಗರ ಗ್ರಾಮ ಹಾಗೂ ನಾಯಕನಹಟ್ಟಿ ಪಟ್ಟಣ, ಸೆ.30ರಂದು ಹೊಳಲ್ಕೆರೆ ಪಟ್ಟಣ, ಹೊಸದುರ್ಗ ಪಟ್ಟಣ ಹಾಗೂ ಚಳ್ಳಕೆರೆ ನಗರ, ಅಕ್ಟೋಬರ್ 01ರಂದು ಹಿರಿಯೂರು ನಗರ , ಅ.08ರಂದು ಚಿತ್ರದುರ್ಗ ನಗರದಲ್ಲಿ ಪತ್ರಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ.

ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ವಿಸರ್ಜನೆ ನಡೆಯುವ ಸ್ಥಳದ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ವಿಸರ್ಜನಾ ದಿನಾಂಕಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...