ಕರ್ನಾಟಕದಲ್ಲಿ ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ : ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ

1 Min Read

ಉಡುಪಿ: ಬಿಜೆಪಿ ಎಂಎಲ್ಸಿ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿದೆ. ಆಡಳಿತಾತ್ಮಕ ಸಮಸ್ಯೆ ಊಹೆಗೂ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗಲ್ಲ‌. ಯಾವ ಕಾರಣಕ್ಕೆ ಇಂಥಹ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿ 12,500 ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಂಕಷ್ಟ ತೋಡಿಕೊಂಡಿದ್ದಾರೆ. ಅಂಗಡಿಯ ವರ್ಗಾವಣೆಗೆ 18 ಲಕ್ಷ ರೂಪಾಯಿ ಸರ್ಕಾರಕ್ಕೆ ಪಾವತಿಸುವ ನಿಯಮವಿದೆ. ಆದರೆ 25 ಲಕ್ಷ ರೂಪಾಯಿಗೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ. ಹೊಸ ಸನ್ನದಿಗೆ 10 ಲಕ್ಷದ ಬದಲು 75 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಿಂದಾನೇ 42 ಸಾವಿರ ಕೋಟಿ ಬರುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರದ ಕೂಪವಾಗಿ ಕಾಡುತ್ತಿದ್ದಾರೆ.

ಲಂಚ ಕೊಡದೆ ಯಾವ ಕೆಲಸವು ಆಗುದಿಲ್ಲ. ಅಧಿಕಾರಿಗಳು ಮಾಹಿತಿ ಹಕ್ಕಿನ ಏಜೆಂಟ್​​ಗಳಾಗಿದ್ದಾರೆ ಎಂದು ಆರೋಪಿಸಿದ್ದಾರೆ. ದಯವಿಟ್ಟು ಈ ಪತ್ರದ ಹಿನ್ನೆಲೆಯಲ್ಲಿ ತನಿಖೆ ಆಗಬೇಕು. ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಸಚಿವರ ತನಿಖೆ ಆಗಬೇಕು. ಮುಖ್ಯಮಂತ್ರಿಗಳ ಕೃಪಾಕಟಾಕ್ಷದ ಅಡಿಯಲ್ಲೇ ಇದೆಲ್ಲವೂ ನಡೆಯುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *