Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆಯಲ್ಲಿ ಸಾಹಿತ್ಯ ಸಮ್ಮೇಳನ : ಸಚಿವರಿಗೆ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಸಹಕಾರ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‍ರವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಚಳ್ಳಕೆರೆಯಲ್ಲಿ 18 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕಸಾಪ ಜಿಲ್ಲಾ ಕಾರ್ಯಕಾರಿ ಸಮಿತಿ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಾಗೂ ಚಳ್ಳಕೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಜೊತೆಗೆ ಚರ್ಚಿಸಲಾಗಿದೆ. 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹೊಳಲ್ಕೆರೆಯಲ್ಲಿ ಆಯೋಜಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಸಮ್ಮೇಳನವನ್ನು ನವಂಬರ್ ಅಂತಿಮ ವಾರದಲ್ಲಿ ಅಥವ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲು ಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವ ಡಿ.ಸುಧಾಕರ್ ರವರನ್ನು ಭೇಟಿ ಮಾಡಿ ಸಹಕಾರ ನೀಡುವಂತೆ ಕೋರಲಾಯಿತು. ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ಕಸಾಪ ಶೀಘ್ರದಲ್ಲಿ ದಿನಾಂಕ ಅಂತಿಮಗೊಳಿಸಲಿದೆ ಎಂದು
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಯವರು ತಿಳಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಣ್ಣ, ಜಿಲ್ಲಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಖಾಸಿಂ ಅಲಿ, ಹರೀಶ್, ಡಿ.ಓ.ಮೊರಾರ್ಜಿ,ಮಾಲತೇಶ ಅರಸ್ ಮತ್ತಿತರರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now