Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆ.17 ಮತ್ತು 18 ರಂದು ಸಾಹಿತ್ಯ ಸಮ್ಮೇಳನ : ಎಲ್ಲರೂ ಭಾಗವಹಿಸುವಂತೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 14 : ಐತಿಹಾಸಿಕ ಚಿತ್ರದುರ್ಗದ ಕೋಟೆ ನಾಡಿನಲ್ಲಿ ಫೆ.17 ಮತ್ತು 18 ರಂದು ನಡೆಯುವ ಹದಿನೆಂಟನೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸುವಂತೆ ಕರುನಾಡ ವಿಜಯಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ಶನಿವಾರ ನಗರದ ಪ್ರಮುಖ ಬೀದಿಗಳಲ್ಲಿರುವ ಅಂಗಡಿ ಮಾಲೀಕರುಗಳಿಗೆ ಮತ್ತು ಸಾರ್ವಜನಿರಲ್ಲಿ ವಿನಂತಿಸಿದರು.

 

ಗಾಂಧಿವೃತ್ತ, ದೊಡ್ಡಪೇಟೆ, ಆನೆಬಾಗಿಲು ರಸ್ತೆ, ಪ್ರಮುಖ ಬೀದಿ ಹಾಗೂ ಸಂತೆಹೊಂಡದ ರಸ್ತೆಯಲ್ಲಿ ಪ್ರತಿ ಅಂಗಡಿಗಳಿಗೆ ತೆರಳಿದ ಕಾರ್ಯಕರ್ತರು ಕಡ್ಡಾಯವಾಗಿ ಕನ್ನಡ ನಾಮಫಲಗಳನ್ನು ಅಂಗಡಿ ಮೇಲೆ ಬರೆಸಬೇಕು. ಇಲ್ಲವಾದಲ್ಲಿ ನಾವುಗಳೆ ಆಂಗ್ಲ ನಾಮಫಲಕಗಳನ್ನು ತೆರವುಗೊಳಿಸಬೇಕಾಗುತ್ತದೆಂದು ಎಚ್ಚರಿಸಿದರು.
ಚಿತ್ರದುರ್ಗದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕನ್ನಡ, ನಾಡು, ನುಡಿ, ನೆಲ, ಜಲದ ರಕ್ಷಣೆಗೆ ಎಲ್ಲರೂ ಒತ್ತು ಕೊಡಬೇಕೆಂದು ಮನವಿ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಯುವ ಘಟಕದ ಘನಶ್ಯಾಂ, ಮಲ್ಲಪ್ರಸಾದ್ ಕುಮಾರ್, ಉಮೇಶ್, ಮಂಜುಳ, ಉಮ, ಲಕ್ಷ್ಮಣ, ರಾಜಪ್ಪ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ , ನಿಸಾರ್ ಅಹಮದ್, ಹಿರಿಯೂರು ಅಧ್ಯಕ್ಷ ತಿಪ್ಪೇಸ್ವಾಮಿ, ಶರತ್, ಜಗದೀಶ್, ಮುಜಾಹಿದ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...