Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

Facebook
Twitter
Telegram
WhatsApp

 

ಚಿತ್ರದುರ್ಗ. ಜುಲೈ.02:   ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ. ಫ.ಗು. ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯ ಮತ್ತು ವಚನಕಾರರ ಬಗ್ಗೆ ಅಮೂಲಾಗ್ರವಾಗಿ ತಿಳಿಯಲು ಡಾ.ಫ.ಗು.ಹಳಕಟ್ಟಿಯವರು ಹಾಗೂ ಅವರ ತಂಡದ ಮಹಾತ್ಕಾರ್ಯದಿಂದ ಸಾಧ್ಯವಾಗಿದೆ. ವಚನ ಸಾಹಿತ್ಯದ ಮೂಲಪ್ರತಿಗಳಾದ ತಾಳೆಗರಿಗಳನ್ನು, ತಾಮ್ರಶಾಸನಗಳನ್ನು, ವಚನಗಂಟುಗಳನ್ನು ಊರೂರಿಗೆ ತೆರಳಿ, ಮನೆ ಮನೆ ಹುಡುಕಿ, ಸಂಗ್ರಹಿಸಿದ ಡಾ.ಫ.ಗು.ಹಳಕಟ್ಟಿಯವರು ಗ್ರಂಥರೂಪದಲ್ಲಿ ಪ್ರಕಟಿಸಿ, ಮೂರ್ತ ಸ್ವರೂಪ ನೀಡಿ ಸಾಹಿತ್ಯ ಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.

ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ.ಸಂತೋಷ ಪವಾರ್ ಉಪನ್ಯಾಸ ನೀಡಿ, ನಮ್ಮ ನಾಡಿನ ಭವ್ಯ ಪರಂಪರೆ ಅನುಪಮ ಸಂಸ್ಕøತಿ ಬಗ್ಗೆ ಅಪಾರವಾದ ಅಭಿಮಾನ ಹೊಂದಿದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ತಮ್ಮ ತ್ಯಾಗ, ಪರಿಶ್ರಮದಿಂದ ಹೊಸ ಇತಿಹಾಸ ಬರೆದರು. 12ನೇ ಶತಮಾನದ ನಂತರ ವಚನ ಸಾಹಿತ್ಯಕ್ಕೆ ಪುನರ್ ಚೈತನ್ಯವನ್ನು ತಂದುಕೊಟ್ಟ ಕೀರ್ತಿ ಡಾ. ಹಳಕಟ್ಟಿಯವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಬಸವಾದಿ ಶರಣರ ವಚನಗಳನ್ನು ಬೆಳಕಿಗೆ ತಂದವರು, ಒಂದು ವಿಶ್ವವಿದ್ಯಾಲಯ ಸಾಧಿಸಿದಷ್ಟು ಕೆಲಸವನ್ನು ಏಕಾಂಗಿಯಾಗಿ ಸಾಧಿಸಿದ ಹಳಕಟ್ಟಿಯವರು ಒಂದು ವ್ಯಕ್ತಿಯಾಗಿರದೇ ಒಂದು ಶಕ್ತಿಯಾಗಿ ಕಂಡುಬರುತ್ತಾರೆ ಎಂದು ಅಭಿಪ್ರಾಯಪಟ್ಟರು.

ಗಮನ ಸೆಳೆದ ಕವಿಗೋಷ್ಠಿ: ಡಾ.ಫ.ಗು.ಹಳಕಟ್ಟಿಯವರ ಜನ್ಮ ದಿನಾಚರಣೆ ಅಂಗವಾಗಿ ಡಾ.ಫ.ಗು.ಹಳಕಟ್ಟಿಯವರು ಬದುಕು, ಬರಹ ಹಾಗೂ ವಚನ ಸಾಹಿತ್ಯ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕವಿಗೋಷ್ಠಿ ಗಮನ ಸೆಳೆಯಿತು.

ಎಸ್.ಗಂಗಾಧರಪ್ಪ, ಮೀರಾ ನಾಡಿಗ್, ನಿರ್ಮಲ ಮರಡಿಹಳ್ಳಿ, ಎಂ.ಎಸ್.ಸೌಮ್ಯ, ರಾಜೇಶ್ವರಿ ಶ್ರೀಧರ್, ಜಬೀವುಲ್ಲಾ, ದೀಪಿಕಾ ಬಾಬು, ಕೆ.ಪೂರ್ಣಿಮಾ ಶಾಸ್ತ್ರಿ, ಕ್ಯಾಗಿಗುಂಟೆ  ಶಿವಣ್ಣ, ಬಬ್ಬೂರು ತಿಪ್ಪೀರನಾಯಕ, ಡಾ.ಉಮೇಶ್ ಬಾಬು ಮಠದ್, ಸಿ.ಬಿ.ಶೈಲಾ ಜಯಕುಮಾರ್, ಶಬ್ರಿನಾ ಅಹಮದ್, ಬಹಬೂಬಿ, ಕೆ.ಬಿ.ತಿಪ್ಪಮ್ಮ, ಕಾದಂಬರಿ, ಗಿರೀಶಾಚಾರ, ಭುವನೇಶ್ವರಿ, ಲೀಲಾವತಿ ಯುವರಾಜ, ಸಂಕಲ್ಪ ಸೇರಿದಂತೆ ಸುಮಾರು 21ಕ್ಕೂ ಹೆಚ್ಚು ಕವಿಗಳು ಕವನ ವಾಚನ ಮಾಡಿದರು.

ಇದೇ ಸಂದರ್ಭದಲ್ಲಿ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಿದ ಕವಿಗಳಿಗೆ ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್‍ನ ಕಾರ್ಯದರ್ಶಿ ಷಣ್ಮುಖಯ್ಯ, ನೇಕಾರರ ಒಕ್ಕೂಟದ ಅಧ್ಯಕ್ಷ ಗೋವಿಂದಪ್ಪ, ನಿವೃತ್ತ ಮುಖ್ಯ ಶಿಕ್ಷಕ ಹುರುಳಿ ಬಸವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!