ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 15 : ಕೆಳಗೋಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಂಘದಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ 134 ನೇ ಜಯಂತಿಯನ್ನು ಸೋಮವಾರ ಆಚರಿಸಲಾಯಿತು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಕೇವಲ ದಲಿತರಿಗಷ್ಟೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿಲ್ಲ. ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾಭಿಮಾನ, ಸ್ವಂತ್ರವಾಗಿ ಬದುಕಬೇಕೆಂದು ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ಎಲ್ಲರೂ ಸಂವಿಧಾನದ ಆಶಯಗಳಂತೆ ಬದುಕಿದಾಗ ಮಾತ್ರ ಡಾ.ಬಿ.ಆರ್.ಅಂಬೇಡ್ಕರ್‍ರವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ಅಂಗಡಿ ಮಂಜಣ್ಣ, ಸಾಗಲಗಟ್ಟೆ ಜಯಣ್ಣ, ನ್ಯಾಯವಾದಿ ಬೀಸ್ನಳ್ಳಿ ಜಯಣ್ಣ, ನಗರಸಭೆ ಮಾಜಿ ಸದಸ್ಯ ಪ್ರಕಾಶ್, ರಾಜಣ್ಣ, ಚಂದ್ರು, ರಂಗನಾಥ್, ನ್ಯಾಯವಾದಿ ಮಂಜುಳ
ಮೈಲಾರಣ್ಣ, ಮಂಜು, ಕಿರಣ್, ಹನುಮಂತ, ಮಾರುತಿ, ಬಾಬು, ಶ್ರೀನಿವಾಸ್, ಹಾಲಪ್ಪ, ಸಂತೋಷ್, ದೇವ, ಪರಶುರಾಂ, ನರಸಿಂಹಮೂರ್ತಿ, ನಾಗರಾಜ್, ಶಿಕ್ಷಕಿ ಲೋಲಾಕ್ಷಮ್ಮ ಇನ್ನು ಮುಂತಾದವರು ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

