Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ ತಿಂಗಳಿನಿಂದ ಅಂಗನವಾಡಿಗಳಲ್ಲೂ LKG-UKG ಆರಂಭ : ಲಕ್ಷ್ಮೀ ಹೆಬ್ಬಾಳ್ಕರ್

ಹೆಬ್ಬಾಳ್ಕರ್
---Advertisement---

 

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲಿಗೆ ಭೇಟಿ ನೀಡಿ, ಕಾರ್ಯಕರ್ತೆಯರ ಮನವಿ ಸ್ವೀಕರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪೋಷಕರಿಗೂ ಗುಡ್ ನ್ಯೂಸ್ ನೀಡಿದ್ದಾರೆ. ಜೂನ್ ತಿಂಗಳಿನಿಂದಾನೇ ಅಂಗನವಾಡಿಗಳಲ್ಲೂ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭವಾಗಲಿವೆ ಎಂದಿದ್ದಾರೆ.

ಮುಂದಿನ ಜೂನ್ ತಿಂಗಳಿನಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಜೊತೆಗೆ ಹಂತ ಹಂತವಾಗಿ ಅಂಗನವಾಡಿ ಕಾರ್ಯಜರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು. ನಾನು ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಮಾತನ್ನಾಡಿ ಬಿಎಲ್ಒ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈ ಬಿಡುವಂತೆ ಮಾಡಿದ್ದೆ. ಆದರೆ ಬಿಎಲ್ಒ ಕೆಲಸಗಳಿಗೆ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಮುಕ್ತಿಕೊಡಿಸಲು ಪ್ರಯತ್ನಿಸಲಾಗುವುದು ಎಂದಿದ್ದಾರೆ.

ನಾನೊಬ್ಬ ಮಹಿಳೆಯಾಗಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತಿರುವೆ. ನಾನು ಸಚಿವೆಯಾದ ಬಳಿಕ ಹಲವು ಬೇಡಿಕೆಗಳನ್ನು ಈಡೇರಿಸಿರುವೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಸಂಘಟನೆಯವರ ಜೊತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುವುದು. ಎಂಎ, ಬಿಎಡ್‌, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now