Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಹಾರಕ್ಕೆ ಹಣ ಕೊಟ್ಟು ಲಾಕ್ ಆದ್ರಾ ಜಮೀರ್ : ಏನ್ ಹೇಳುತ್ತೆ ದೇಶದ ಕಾನೂನು..?

---Advertisement---

ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಅವಘಡದಿಂದ ರಾಜಶೇಖರ್ ಎಂಬಾತ ಸತ್ತು ಹೋದ. ಮೃತ ಕಾಂಗ್ರೆಸ್ ಕಾರ್ಯಕರ್ತನೇ ಆದ ಕಾರಣ ಸಚಿವ ಜಮೀರ್ ಅಹ್ಮದ್ 25 ಲಕ್ಷ ಹಣವನ್ನ ಪರಿಹಾರವಾಗಿ ನೀಡಿದ್ದಾರೆ. ಅದು ವೈಯಕ್ತಿಕ ಹಣವಾ..? ಸರ್ಕಾರದಿಂದ ನೀಡಿದ ಪರಿಹಾರವ ಏನು ತಿಳಿದಿಲ್ಲ. ಈ ಸಂಬಂಧ ಜಮೀರ್ ವಿರುದ್ಧ ದೂರು ಕೂಡ ದಾಖಲಾಗಿದೆ. ಹಿಂದೂ ಸಂಘಟನೆಗಳ ಮುಖಂಡ ತೇಜಸ್ ಗೌಡ ಆದಾಯ ಇಲಾಖೆಗೆ ಲಿಖಿತ ದೂರು ನೀಡಿದ್ದಾರೆ.

 

ಆದರೆ ಇದಕ್ಕೆ ಕಾನೂನು ಒಪ್ಪುವುದಿಲ್ಲ. ಕಾನೂನಿಗೆ ವಿರುದ್ಧವಾಗಿ ಪರಿಹಾರವನ್ನ ನೀಡಿದ್ದಾರೆ ಜಮೀರ್. ನಮ್ಮ ದೇಶದಲ್ಲಿ 2017-18ರಲ್ಲಿ ಆರ್ಬಿಐ ನಿರ್ದೇಶನ ಹಾಗೂ ಆದಾಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ 2 ಲಕ್ಷ ರೂಪಾಯಿಗಿಮನತ ಹೆಚ್ಚಿನ ಹಣವನ್ನು ಬೇರೆಯವರಿಂದ ಪಡೆಯುವಂತಿಲ್ಲ. ಇದು ಆದಾಯ ತೆರಿಗೆ ಇಲಾಖೆಯ ಸೆಕ್ಷನ್ 269ST ಸೆಕ್ಷನ್ ಗೆ ವಿರುದ್ಧವಾದುದಾಗಿದೆ. ಆದಾಯ ತೆರಿಗೆ ಇಲಾಖೆಯ ಸೆಕ್ಷನ್ 269STಅಡಿ ಯಾರೇ ಆಗಲಿ ದಿನವೊಂದಕ್ಕರ ಬೇರೊಬ್ಬರಿಗೆ ಎರಡು ಲಕ್ಷ ರೂಪಾಯಿ ಹಣವನ್ನು ಮಾತ್ರ ನಗದು ರೂಪದಲ್ಲಿ ನೀಡಲು ಅವಕಾಶವಿದೆ.

ಎರಡು ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣವನ್ನು ಚೆಕ್, ಡಿಡಿ ಮೂಲಕವೇ ನೀಡಬೇಕು. ಎರಡು ಲಕ್ಷಕ್ಕೂ ಅಧಿಕ ಹಣವನ್ನು ನಗದು ರೂಪದಲ್ಲಿ ನೀಡುವಂತೆ ಇಲ್ಲ. ಆದರೇ, ವಸತಿ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, 25 ಲಕ್ಷ ರೂಪಾಯಿ ಹಣವನ್ನು ನಗದು ರೂಪದಲ್ಲಿ ಮೃತ ರಾಜಶೇಖರ್ ರೆಡ್ಡಿ ತಾಯಿಗೆ ನೀಡಿದ್ದಾರೆ. ಹೀಗಾಗಿ ಇದು ಐಟಿ ಇಲಾಖೆಯ ಕಾಯಿದೆ, ಸೆಕ್ಷನ್ ಗಳ ಉಲಂಘನೆ. ಹೀಗಾಗಿ ಇದರ ಬಗ್ಗೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಿ ಜಮೀರ್ ಅಹಮದ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಮುಖಂಡ ತೇಜಸ್ ಗೌಡ ದೂರಿನಲ್ಲಿ‌ ಉಲ್ಲೇಖಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...