Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಾಯುಕ್ತ ದಾಳಿ : ಬಿಜೆಪಿ ಶಾಸಕರ ಮಗನನ್ನು ಅರೆಸ್ಟ್ ಮಾಡಿದ ಲೋಕಾಯುಕ್ತ ಪೊಲೀಸರು

Facebook
Twitter
Telegram
WhatsApp

 

ಬೆಂಗಳೂರು, (ಮಾ.03) : ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ, ಕೆಎಸ್‌ಡಿಎಲ್‌ ಅಧ್ಯಕ್ಷರೂ ಆಗಿರುವ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್‌ ಮಾಡಾಳ್‌ ಅವರನ್ನು ಲಂಚ ಪಡೆಯುತ್ತಿದ್ದಾರೆ ಎಂಬ ಖಚಿತವಾದ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

ಪ್ರಸ್ತುತ ಪ್ರಶಾಂತ್ ಮಾಡಾಳ್ ಅವರು
ರಾಜ್ಯ ಲೆಕ್ಕಪತ್ರ ಇಲಾಖೆಯ ಜಂಟಿ ನಿಯಂತ್ರಕರಾಗಿ ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ.

ಅವರ ತಂದೆ ಅಧ್ಯಕ್ಷರಾಗಿರುವ ಕೆಎಸ್‌ಡಿಎಲ್‌ ನಲ್ಲಿ ಟೆಂಡರ್‌ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿರುವ ಪ್ರಶಾತ್ ರಾಸಾಯನಿಕ ಸರಬರಾಜು ವೇಳಾಪಟ್ಟಿ ಮತ್ತು ಕಾರ್ಯಾದೇಶ ನೀಡಲು ಗುತ್ತಿಗೆದಾರ ಶ್ರೇಯಸ್ ಅವರಿಗೆ 81 ಲಕ್ಷ ರೂಪಾಯಿಗೆ ಲಂಚಕ್ಕೆ  ಬೇಡಿಕೆ ಇಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಶ್ರೇಯಸ್‌ ಕಶ್ಯಪ್‌ ಬೆಂಗಳೂರು ನಗರ ವಿಭಾಗದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತದ ಎಸ್‌ಪಿ ಕೆ.ವಿ. ಅಶೋಕ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಗುರುವಾರ ಸಂಜೆ 6.45ರ ವೇಳೆಗೆ  ಗುತ್ತಿಗೆದಾರರಿಂದ ₹40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಪ್ರಶಾಂತ್‌ ಅವರನ್ನು ಬಂಧಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!