Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿರ್ಮಿತ ಕೇಂದ್ರದ ಯೋಜನಾ ವ್ಯವಸ್ಥಾಪಕ ಗಂಗಾಧರ್ ಆಸ್ತಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

---Advertisement---

ಕಾಫಿ‌ನಾಡು ಚಿಕ್ಕಮಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು, ದಾಳಿ ನಡೆಸುವ ಮೂಲಕ ಶಾಕ್‌ ನೀಡಿದ್ದಾರೆ. ಏಕಕಾಲಕ್ಕೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ನಿರ್ಮಿತ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ದಾಳಿ ನಡೆಸಲಾಗಿದೆ.

ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಜಯನಗರ ಬಡಾವಣೆಯಲ್ಲಿರುವ ಮನೆ ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್ ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ಗಂಗಾಧರ್ ಅವರಿಗೆ ಸೇರಿದ್ದು ಎನ್ನಲಾದ ಮೂರು ಕೋಟಿ ಎಪ್ಪತ್ತಾರು ಲಕ್ಷದ ಅಕ್ರಮ ಆಸ್ತಿ ಪತ್ತೆಯಾಗಿದೆ.

ಅಷ್ಟೇ ಅಲ್ಲ ಚಿಕ್ಕಮಗಳೂರು ನಗರದಲ್ಲಿ 16 ಸೈಟ್, ಅಲ್ಲಂ ಗ್ರಾಮದ ಬಳಿ ಒಂದು ರೆಸಾರ್ಟ್, ಪತ್ನಿ ಹೆಸರಲ್ಲಿ ಒಂದು ಪೆಟ್ರೋಲ್ ಬಂಕ್ ಮಾಡಲಾಗಿದೆ. ಚಿಕ್ಕಮಗಳೂರು ನಗರದ ಅರವಿಂದನಗರ ಹಾಗೂ ಜಯನಗರದಲ್ಲಿ ಎರಡು ಮನೆ ಇರೋದು ಪತ್ತೆಯಾಗಿದೆ. ಜೊತೆಗೆ ಚಿನ್ನ ಬೆಳ್ಳಿ ಬಗ್ಗೆ ಮತ್ತೊಂದು ತಂಡದಿಂದ ಪರಿಶೀಲನೆ ನಡೆಸಲಾಗ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment