Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಸಜೀವ ದಹನ : ಇಂದು ಅಂತ್ಯಕ್ರಿಯೆ

---Advertisement---

ಸಾವು ಕೆಲವೊಮ್ಮೆ ಅದೆಷ್ಟು ಭೀಕರವಾಗಿ ಬರುತ್ತೆ ಅಲ್ವಾ. ಎಷ್ಟೋ ಜನರ ಜೀವ ಉಳಿಸಿರ್ತಾರೆ ಪೊಲೀಸರು. ಆದರೆ ಇಂದು ಕಾರಿನಲ್ಲಿ ಅದೇ ಪೊಲೀಸ್ ವೃತ್ತಿಯಲ್ಲಿದ್ದ ಪಂಚಾಕ್ಷರಿ ಸಾಲಿಮಠ ಅವರು ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ನಡೆದದ್ದು ದುರಂತವೇ ಸರಿ.

 

ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗದೇ ಇದ್ದಿದ್ದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. ಕಾರಿನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿಯೇ ಅವರ ದೇಹ ಸುಟ್ಟುಹೋಗಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರ ಹೊಲಯದಲ್ಲಿ ಘಟನೆ ನಡೆದಿದೆ. ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರ್‌ ಪ್ರಯಾಣ ಮಾಡುವಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಭೀಕರ ಘಟನೆ ನಡೆದಿದೆ.

I20 ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಂದು ಪಂಚಾಕ್ಷರಿ ವೀರಯ್ಯ ಸಾಲಿಮಠ ಅವರ ಅಂತ್ಯಕ್ರಿಯೆ ನಡೆಯಲಿದೆ. ಮುರಗೋಡ ಗ್ರಾಮದಲ್ಲಿ ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now