ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30 : ಇಂದು ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗ, ಹಾಸನ, ಕಲಬುರಗಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆಯ ಆರೋಪದಡಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ಜೊತೆ ಶೋಧ ಕಾರ್ಯ ನಡೆಸಿದ್ದಾರೆ.
ಇಂದು ಬೆಳ್ ಬೆಳಿಗ್ಗೆನೇ ಜಿಲ್ಲೆಯ ಹಿರಿಯೂರಿನ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ಅವರ ಹಿರಿಯೂರಿನ ಚಂದ್ರಾ ಲೇಔಟ್ ನಲ್ಲಿರುವ ಅವರ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ.
ಈ ವೇಳೆ ಸುಮಾರು 400 ಗ್ರಾಂ ನಷ್ಟು ಚಿನ್ನ, ಬೆಳ್ಳಿ ಆಭರಣಗಳು ಮತ್ತು ಸುಮಾರು ಒಂದೂವರೆ ಲಕ್ಷ ರೂಪಾಯಿಯಷ್ಟು ನಗದು ಹಣ ಪತ್ತೆಯಾಗಿದೆ. ಸದ್ಯ ಇವೆಲ್ಲವನ್ನೂ ವಶಕ್ಕೆ ಪಡೆದಿರುವ ಲೋಕಾಯುಕ್ತರು ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.
ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರಿನ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







