Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇದೀಗ ಬಂದ ಸುದ್ದಿ | ಚಿತ್ರದುರ್ಗ | ಬೆಳ್ ಬೆಳಿಗ್ಗೆನೇ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ, ಪರಿಶೀಲನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.30 : ರಾಜ್ಯದ ಹಲವೆಡೆ ಇಂದು ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆಯ ಆರೋಪದಡಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆ ಪರಿಶೀಲನೆ ಜೊತೆ ಶೋಧ ಕಾರ್ಯ ನಡೆಸಿದ್ದಾರೆ.

ಇಂದು ಬೆಳ್ ಬೆಳಿಗ್ಗೆನೇ ಹಿರಿಯೂರಿನ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ಅವರ ಹಿರಿಯೂರಿನ ಚಂದ್ರಾ ಲೇಔಟ್ ನಲ್ಲಿರುವ ಅವರ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರಿನ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆದಿದೆ.

ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ‌ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment