ಬೆಂಗಳೂರು: ಭ್ರಷ್ಟಾಚಾರದ ಆರೋಪ ಕೇಳಿ ಬಂದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಸರಿಯಾಗಿಯೇ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ 4 ಕಡೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ಐಡಿಎಲ್ ಚೀಫ್ ಎಂಜಿನಿಯರ್ ವಸಂತ್ ವಿ ನಾಯಕ್, ಬಿಡಿಎ ವ್ಯಾಪ್ತಿಯ ಆರ್ ಎಫ್ ಓ ಡಾಲೇಶ್, ರೈತ ಸೇವಾ ಸಹಕಾರ ಸಂಘದ ಸಿಇಓ ಶಶಿಧರ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಷ್ಟೇ ಅಲ್ಲ ಯಾದಗಿರಿಯ ವಿದ್ಯುತ್ ಇಲಾಖೆಯ ಉಪ ವಿದ್ಯುತ್ ಪರಿವೀಕ್ಷಕ ವಿರೇಶ್ ಹಿರೇಮಠ, ಮಂಡ್ಯದ ಲೋಕೋಪಯೋಗಿ ಇಲಾಖೆಯ ಮಂಡ್ಯ ಉಪವಿಭಾಗದ ಎಎಇ ಎಸ್ ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಕೆ.ಸುರಕೋಡ, ಹಾಸನ ಮಹಾನಗರ ಪಾಲಿಕೆಯ ಎಎಇ ಎಂ.ಸಿ.ಸತ್ಯನಾರಾಯಣ, ಮೈಸೂರಿನ ಜಲ ಭವನದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಎಇ ಮತ್ತು ಇಇ ಆಸಿಫ್ ಇಕ್ಬಾಲ್, ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಕಿರಿಯ ಇಂಜಿನಿಯರ್ ಆಗಿರುವ ಪ್ರಕಾಶ್ ಪಿ.ಜಿ, ಮನೆಗಳ ಮೇಲೂ ದಾಳಿ ನಡೆದಿದೆ.
ಈ ದಾಳಿಯ ವೇಳೆ ಹಾಸನದ ಮಹಾನಗರ ಪಾಲಿಕೆ ಎಇಇ ಎಂಸಿ ಸತ್ಯನಾರಾಯಣ ಅವರು ಅಧಿಕಾರಿಗಳಿಗೆ ಬಾಗಿಲನ್ನೇ ತೆಗೆಯದೆ ಆಟ ಆಡಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್, ಇನ್ಸ್ ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದೆ. ಬೆಳಗ್ಗೆ 5.15ಕ್ಕೆ ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದರು ಸಹ ಮನೆಯ ಲೈಟ್ಸ್ ಆಫ್ ಮಾಡಿ, ಬಾಗಿಲನ್ನು ತೆರೆಯದೆ ಸತಾಯಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






