Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಲಾರ, ದಾವಣಗೆರೆಯಲ್ಲಿ ಲೋಕಾಯುಕ್ತ ದಾಳಿ..!

---Advertisement---

ಕೋಲಾರ ಹಾಗೂ ದಾವಣಗೆರೆಯ ಹಲವೆಡೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ಕೋಟ್ಯಾಂತರ ರೂಪಾಯಿ ಅಕ್ರಮ ಆಸ್ತಿಗಳನ್ನ ಹೊಂದಿರುವ ಆರೋಪದ ಮೇಲೆ ಈ ದಾಳಿ ನಡೆದಿದೆ. ಅನುಮಾನವಿರುವ ಅಧಿಕಾರಿಗಳ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆದಿದೆ.

 

ದಾವಣಗೆರೆಯಲ್ಲಿ ಹಲವು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನೀರು ಸರಬರಾಜು ಇಲಾಖೆ ಸಹಾಯಕ ಇಂಜಿನಿಯರ್ ಸಹಾಯಕ ಇಂಜಿನಿಯರ್ ಬಿ.ರವಿ ಅವರ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಅದೇ ರೀತಿ ಕೋಲಾರದಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೋಲಾರ ಜಿಲ್ಲೆಯ ಹಲವೆಡೆ ದಾಳಿ ನಡೆಸಿದ ಅಧಿಕಾರಿಗಳು ಕೋಲಾರದ ಸರ್ವೇ ಸೂಪರ್ ವೈಸರ್ ಸುರೇಶ್ ಬಾಬು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಸರ್ವೇ ಇಲಾಖೆ ಅಧಿಕಾರಿ ಸುರೇಶ್ ಬಾಬು ಸೇರಿದಂತೆ ಒಟ್ಟು ಆರು ಕಡೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...