Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಂಗಳೂರು, ಶಿವಮೊಗ್ಗ ಸೇರಿ ಹಲವೆಡೆ ಲೋಕಾಯುಕ್ತ ದಾಳಿ..!

---Advertisement---

ಬೆಂಗಳೂರು: ಇವತ್ತು ಬೆಳಗ್ಗೆಯಿಂದಾನೂ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೂ ದಾಳಿಯಾಗಿದೆ. ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ ಅವರ ಮನೆ ಮೇಲು ದಾಳಿಯಾಗಿದೆ. ದಾವಣಗೆರೆಯಿಂದ ಎರಡು ಜೀಪುಗಳಲ್ಲಿ ಆಗಮಿಸಿರುವ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಮೂವರು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದ್ದು, ವೈದ್ಯಕೀಯ ಅಧಿಕಾರಿ ಮಂಜುನಾಥ್, ಪಿಯು ಬೋರ್ಡಗ ನಿರ್ದೇಶಕಿ ಸುಮಂಗಳ, ಸರ್ವೇಯರ್ ಅಧಿಕಾರಿ ಗಂಗಾ ಮರೀಗೌಡ ಅವರ ಮನೆಗಳ ಮೇಲೆ ದಾಳಿ ನಡೆಸಿದೆ. ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದ ತಂಡ ಸುಮಂಗಳ ಅವರ ಕೆಂಗೇರಿಯ ಸ್ಯಾಟಲೈಟ್ ಟೌನ್‌ನಲ್ಲಿರೋ ಮನೆ ಮೇಲೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದೆ. ಬಾಗಲಕೋಟೆಯಲ್ಲಿ ಕೆಬಿಜೆಎನ್‌ಎಲ್‌ AEE (ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜನಿಯರ್) ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆಲಮಟ್ಟಿ ಬಲದಂಡೆ ಕಾಲುವೆಯ ಸಹಾಯಕ ಮುಖ್ಯ ಇಂಜಿನಿಯರ್ ಚೇತನ್. ನವನಗರದ ಸೆಕ್ಟರ್ 16ರಲ್ಲಿರುವ ಚೇತನ್‌ ಅವರ ಮನೆ ಹಾಗೂ ಕಮತಗಿಯಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now