Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಧಾರವಾಡದ ಮಲಪ್ರಭಾ ಯೋಜನೆ ಅಧಿಕಾರಿ ಸೇರಿ ಹಲವೆಡೆ ಲೋಕಾಯುಕ್ತ ದಾಳಿ..!

---Advertisement---

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಹಲವು ಅಧಿಕಾರಿಗಳ‌ ಮನೆ ಮೇಲೆ ದಾಳಿ ನಡೆಸಿದ್ದಾರೆ. ಶಿವಮೊಗ್ಗ, ಧಾರವಾಡ, ಬೆಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಶಿವಮೊಗ್ಗದಲ್ಲಿ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆನೇಕಲ್ ಪಟ್ಟಣದ ಪಂಚಾಯತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗದ ಪಟ್ಟಣ ಪೊಲೀಸ್ ನಿರೀಕ್ಷಕ ಧ್ರುವರಾಜ್, ಧಾರವಾಡದ ಮಲಪ್ರಭಾ ಯೋಜನೆ ಇಂಜಿನಿಯರ್ ಅಶೋಕದ ವಾಲ್ಸಂದ್, ಕಲಬುರಗಿ ಪಿಆರ್ಇ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ, ಸಣ್ಣೂರು ಗ್ರಾಮ ಪಂಚಾಯತಿ, ಪಿಡಿಒ ರಾಮಚಂದ್ರ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ಗದಗದ ಶಹರ ಠಾಣೆ ಸಿಪಿಐ ಡಿಬಿ ಪಾಟೀಲ್ ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಪಾಟೀಲ್ ಅವರ ಗದಗದ ಶಿವಾನಂದ ನಗರದ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಅಲ್ಲದೆ ಅವರ ಬಾಗಲಕೋಟೆ, ಜಮಖಂಡಿಯಲ್ಲಿರುವ ಮನೆಗಳ ಮೇಲೂ ದಾಳಿ ನಡೆದಿದೆ. ಕೆರೂರಿನಲ್ಲಿರುವ ಮನೆ ಮೇಲೂ ದಾಳಿ ನಡೆಸಿ, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲೂ ದಾಳಿ ನಡೆಸಿರುವ ಅಧಿಕಾರಿಗಳು, ಬಿಬಿಎಂಪಿಯಲ್ಲಿರುವ ಪ್ರಕಾಶ್ ಎಇ ಎನ್ನುವವರ ಮೇಲೆ ದಾಳಿ ನಡೆಸಿದ್ದಾರೆ. ಕಲಬುರಗಿಯ ಮಾಜಿ ಇಂಜಿಯರ್ ಮನೆ ಮೇಲೂ ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ ಕಲಬುರಗಿಯ ಪಿಡಿಓ ಮನೆ ಮೇಲೂ ದಾಳಿ ನಡೆಸಿ, ಹಲವು ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...