ಸುದ್ದಿಒನ್, ಚಿತ್ರದುರ್ಗ, ಜನವರಿ. 14 : ಇಂದಿರಾ ಆವಾಸ್ ಯೋಜನೆಯಡಿಯಲ್ಲಿ ಮನೆ ಬಿಲ್ ಮಂಜೂರು ಮಾಡಿಕೊಡಲು 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಘಟನೆ ಭಾನುವಾರ ನಡೆದಿದೆ.
ಹಿರಿಯೂರು ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಬಂಧಿತ ಆರೋಪಿ.
ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವರ
ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ದೂರುದಾರ ಪಾಂಡುರಂಗಪ್ಪ ಮನೆಯ ಬಿಲ್ ಮಂಜೂರು ಮಾಡಿ ಕೊಡಲು ಬಿಲ್ ಕಲೆಕ್ಟರ್ ಆನಂದ್ 25 ಸಾವಿರ ಲಂಚ ಕೇಳಿದ್ದರು. ಭಾನುವಾರ ಮನೆಯಲ್ಲಿ 25
ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಪೊಲೀಸರಿಗೆ ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಲಾಗಿದೆ.
ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















