Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆ: ದಾವಣಗೆರೆಯಲ್ಲಿ ನರೇಂದ್ರ ಮೋದಿ ಹೆಸರಲ್ಲಿ ವಿಶೇಷ ಪೂಜೆ

---Advertisement---

ಸುದ್ದಿಒನ್, ದಾವಣಗೆರೆ, ಜೂನ್‌. 10 : ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ 4399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ ನರೇಂದ್ರ ಮೋದಿ ಅವರು ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿನ್ನೆಲೆಯಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರದ ದೊಡ್ಡಪೇಟೆಯ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜನಹಳ್ಳಿ ಶಿವಕುಮಾರ್ ಅವರ ನೇತೃತ್ವದಲ್ಲಿ ವಿಘ್ನ ನಿವಾರಕನಿಗೆ ಪ್ರಾರ್ಥನೆ ಸಲ್ಲಿಸಿ ದೇಶದ ಅಭಿವೃದ್ಧಿ ಮತ್ತು ಆಂತರಿಕ ಭದ್ರತೆಗಾಗಿ ಇನ್ನೂ ಹಲವು ವರ್ಷಗಳ ಕಾಲ ನರೇಂದ್ರ ಮೋದಿ ಅವರೇ ದೇಶವನ್ನು ಮುನ್ನಡೆಸುವಂತಾಗಬೇಕು ಎಂದು ಹೇಳಿದರು.

ಯಶವಂತರಾವ್ ಜಾಧವ್ ಮಾತನಾಡಿ ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಪರೂಪದ ಮೈಲಿಗಲ್ಲಿಗೆ ಸಾಕ್ಷಿಯಾಗಿದ್ದಾರೆ. ಸಂವಿಧಾನ ಜಾರಿಗೆ ಬಂದ ನಂತರ ಭಾರತದಲ್ಲಿ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಡಳಿತ ನಡೆಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ದೇಶಕ್ಕೆ ಹೆಮ್ಮೆಯ ವಿಚಾರ ಎಂದು ಹೇಳಿದರು.

ಮೇ 26, 2014 ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದ ನರೇಂದ್ರ ಮೋದಿ ಅವರು, ಸತತ 4,399 ದಿನಗಳ ಕಾಲ ಸೇವೆ ಸಲ್ಲಿಸುವ ಮೂಲಕ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.  “ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಅತಿ ದೊಡ್ಡ ಅಳತೆಗೋಲು. ನಮ್ರತೆ, ಸಮರ್ಪಣಾ ಭಾವ ಮತ್ತು ಕರ್ತವ್ಯ ಪ್ರಜ್ಞೆಯಿಂದ ದಣಿವರಿಯದೆ ದುಡಿಯುವ ವ್ಯಕ್ತಿ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ” ಎಂಬುದನ್ನು ಮೋದಿ ಅವರು ಸಾಬೀತುಪಡಿಸಿದ್ದಾರೆ ಎಂದು ತಿಳಿಸಿದರು.

ಮೋದಿಯವರ 12 ವರ್ಷಗಳ ಆಡಳಿತವು ಭಾರತದ ಹೆಮ್ಮೆಯನ್ನು ಮರುಸ್ಥಾಪಿಸಿದೆ ಮತ್ತು ದೇಶವನ್ನು ದಾಸ್ಯದ ಮನಸ್ಥಿತಿಯಿಂದ ಹೊರ ತಂದಿದೆ. ಆತ್ಮನಿರ್ಭರ್, ಮಹಿಳಾ ಸಬಲೀಕರಣ, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜನಹಳ್ಳಿ ಶಿವಕುಮಾರ್ ಮಾತನಾಡಿ “ಮೋದಿ ಅವರು ‘ದೇಶವೇ ಮೊದಲು’ ಎಂಬ ತತ್ವದಡಿ ಮುನ್ನಡೆಯುತ್ತಿರುವ ದಣಿವರಿಯದ ಕರ್ಮಯೋಗಿ”. ಆತ್ಮನಿರ್ಭರ, ವಿಕಸಿತ ಭಾರತ ಆಗಲು ನರೇಂದ್ರ ಮೋದಿಯವರ ಅವಶ್ಯಕತೆ ಬಹಳ ಇದೆ. ಜಾಗತಿಕ ಬಿಕ್ಕಟ್ಟಿನಿಂದ ಭಾರತಕ್ಕೆ ತೊಂದರೆಯಾಗದಂತೆ ಮುನ್ನಡೆಸುವ ಶಕ್ತಿ ಮೋದಿಯವರಿಗೆ ಮಾತ್ರ ಇದೆ  ಎಂದು ಹೇಳಿದರು.

ನಮ್ಮ ನೆಚ್ಚಿನ ಪ್ರಧಾನಮಂತ್ರಿ ದೇಶ ಕಂಡ ಅಪ್ರತಿಮ ನಾಯಕರು. ಸುದೀರ್ಘವಾದ ರಾಜಕೀಯ ಜೀವನದಲ್ಲಿ ಭಾರತದ ಪ್ರಧಾನಮಂತ್ರಿ ಯಾಗಿ 12 ವರ್ಷ ಪೂರೈಸಿದ್ದಾರೆ. ಜನರ ಪರ ರಾಜಕಾರಣ ಮಾಡಿ ಜನರ ಹಿತಕ್ಕಾಗಿ ದಿನಕ್ಕೆ 18 ತಾಸು ಕೆಲಸ ಮಾಡಿದ್ದಾರೆ. ನಿಂರತರ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.  ಅವರು ಮಾಡಿರುವ ಹಲವಾರು ಯೋಜನೆಗಳು ಭಾರತವನ್ನು ವಿಶ್ವದಲ್ಲಿಯೇ ಮೂರನೇ ಆರ್ಥಿಕ ಶಕ್ತಿಯಾಗಿ ತೆಗೆದುಕೊಂಡು ಹೋಗಿದೆ. ಭಾರತದ ಅಭಿವೃದ್ಧಿಯಲ್ಲಿ ಅತ್ಯಂತ ಕೆಳ ವರ್ಗದವರೂ ಕೂಡ ಅದರ ಲಾಭ ಮುಟುವಂತೆ ಮಾಡಿದ್ದಾರೆ. ಅದಕ್ಕಾಗಿಯೇ ಪ್ರಥಮವಾಗಿ 25 ಕೋಟಿ ಜನರು ಬಡತನದಿಂದ ಮೇಲೆತ್ತುವ ಕಾರ್ಯವಾಗಿದೆ. ಬಡವರಿಗೆ ಮನೆಗಳನ್ನು ನೀಡುವ ಮುಖಾಂತರ ಆರೋಗ್ಯ ವಿಮೆ, ಶಿಕ್ಷಣ, ಉದ್ಯೋಗ ಕೊಡುವ ಮುಖಾಂತರ ಅವರು ಮೂರು ಕೆಲಸಗಳನ್ನು ಬಹಳ ಸ್ಪಷ್ಟವಾಗಿ ಮಾಡಿದ್ದಾರೆ.  ಜನಸಾಮಾನ್ಯರು, ಬಡವರು, ದೀನದಲಿತರಿಗೆ, ಹೆಣ್ಣು ಮಕ್ಕಳಿಗೆ  ಮತ್ತು ಯುವಕರಿಗೆ, ಶಿಕ್ಷಣ, ಉದ್ಯೋಗ, ಸಬಲೀಕರಣ ಮೂರನ್ನು ಕೊಟ್ಟಿರುವ ಧೀಮಂತ ನಾಯಕ ನರೇಂದ್ರ ಮೋದಿ ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಬಿ. ರಮೇಶ್ ನಾಯ್ಕ್, ಶಿವನಗೌಡ ಟಿ. ಪಾಟೀಲ್, ಆನೆಕೊಂಡ ಪುಟ್ಟಣ್ಣ, ರಾಕೇಶ್ ಬಜರಂಗಿ, ಗೋವಿಂದರಾಜ್, ಮಾತಲೇಶ್, ಕಿಶೋರ್ ಕುಮಾರ್, ,ರಾಜು ನೀಲಗುಂದ, ಹರೀಶ್ ಹೊನ್ನೂರು, ರವಿ, ಯರಿಸ್ವಾಮಿ,  ಟಿಂಕರ್ ಮಂಜಣ್ಣ, ಗುರು ಸೋಗಿ, ನವೀನ್ ಕುಮಾರ್ ಹೆಚ್. ಬಿ., ಜಗದೀಶ್ ಹೆಚ್. ಎನ್., ಶ್ರೀ ನಿವಾಸ್ ಪಿಸಾಳೆ, ಶಂಕರ್, ಬಸವರಾಜ್, ಕುಮಾರ್, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಗ್ಯ ಪಿಸಾಳೆ, ಪುಷ್ಪ ವಾಲಿ, ಮಂಜುಳಾ ಇಟಗಿ ಮತ್ತಿತರರು ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now