ರಾಯಚೂರು: ಭತ್ತ ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಟೈರ್ ಪಲ್ಟಿಯಾಗಿದ್ದೆ ಇದಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಲಾರಿ ಪಲ್ಟಿಯಾಗಿರುವ ದೃಶ್ಯ ನೋಡಿದ್ರೆ ಎಂಥವರಿಗೂ ಮೈ ನಡುಕ ಬರುತ್ತೆ. ಡ್ರೈವರ್ ಕಥೆ ಏನಾಯ್ತೋ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬುದು ತಿಳಿದು ಬಂದಿದೆ.
ಈ ಘಟನೆ ಜಿಲ್ಲೆಯ ದುಗನೂರು ಕ್ರಾಸ್ ಬಳಿ ನಡೆದಿದೆ. ಭತ್ತದ ಚೀಲಗಳನ್ನ ಲಾರಿಯಲ್ಲಿ ಲೋಡ್ ಮಾಡಿಕೊಂಡು ಡ್ರೈವರ್ ಹೋಗಿದ್ದಾನೆ. ಆದ್ರೆ ದುಗನೂರ್ ಕ್ರಾಸ್ ಬಳಿ ಹೋಗುತ್ತಿದ್ದಂತೆ ಲಾರಿಯ ಟೈಯರ್ ಪಂಚರ್ ಆಗಿದೆ. ಪರಿಣಾಮ ಲಾರಿ ಸಂಪೂರ್ಣವಾಗಿ ಉಲ್ಟಾ ಬಿದ್ದಿದೆ.
ಲಾರಿಯಲ್ಲಿದ್ದ ಭತ್ತದ ಚೀಲಗಳು ಬಯಲಿಗೆಲ್ಲಾ ಬಿದ್ದಿದೆ. ಇನ್ನೊಂದಷ್ಟು ಚೀಲಗಳು ಲಾರಿಯಲ್ಲೇ ಇವೆ. ಆದ್ರೆ ಈ ಘಟನೆಯಿಂದ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಇಡಪನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…