Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಯೋ ವೃದ್ಧ ತಂದೆ ತಾಯಿಯರನ್ನು ಪ್ರೀತಿಸಿ ಗೌರವಿಸಿ : ಡಾ. ಡಿ. ಧರಣೇಂದ್ರಯ್ಯ ಅಭಿಮತ.

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 20 : ಇಂದಿನ ಮಕ್ಕಳಿಗೆ ನೈತಿಕ ಮೌಲ್ಯದ ಕೊರತೆಯಿದ್ದು ವಯಸ್ಸಾದ ತಂದೆ ತಾಯಿ. ಅಜ್ಜಿ. ತಾತ ಇತರರನ್ನು ಮನೆಯಿಂದ ದೂರ ತಳ್ಳದೆ ಪ್ರೀತಿ ಮಮತೆ ವಾತ್ಸಲ್ಯ ನೀಡಿ ಹಾರೈಕೆ ಮಾಡುವ ಕೆಲಸಕ್ಕೆ ಇಂದಿನ ಯುವ ಸಮುದಾಯ ಮುಂದಾಗಬೇಕು ಎಂದು ಖ್ಯಾತ ಸಮಾಜ ವಿಜ್ಞಾನಿ ಹಾಗೂ ಎನ್.ಎಸ್.ಎಸ್ ಘಟಕದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ಡಿ. ಧರಣಿಯಂದ್ರಯ್ಯ ಅಭಿಪ್ರಾಯಪಟ್ಟರು.

ನಗರದ ನಿವೃತ್ತ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆ ತಾಲೂಕು ಘಟಕ. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕ. ಹಾಗೂ ಶ್ರೀ ಏಕನಾಥೇಶ್ವರಿ ಸಂಗೀತ ವಿದ್ಯಾಲಯ ಹಿರಿಯೂರು. ಇವರುಗಳ ಸಂಯುಕ್ತ ಆಶಯದಲ್ಲಿ ಎಸ್ ಎಸ್ ಎಲ್ ಸಿ.ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಆಸ್ತಿ ಸಂಪತ್ತು ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಎಸ್. ಜಿ.ರಂಗಸ್ವಾಮಿ ಸಕ್ಕರ. ಮಾತನಾಡಿ, ತಾಲೂಕಿನಲ್ಲಿ ಮಕ್ಕಳ ಸಾಹಿತ್ಯ ವೇದಿಕೆ ಫೆಬ್ರವರಿ 2002 ರಲ್ಲಿ ಅಸ್ತಿತ್ವಕ್ಕೆ ಬಂದಿತು.

ಅಂದಿನಿಂದ ಇಂದಿನವರೆಗೆ ಮಕ್ಕಳ ಸಾಂಸ್ಕೃತಿಕ ಬದುಕಿಗೆ ಚೇತನ ಶಕ್ತಿಯಾಗಿ ಬೆಳೆದಿದೆ ವಚನ ಗಾಯನ.ರಂಗಗೀತೆ. ಜಾನಪದ. ಪ್ರಬಂಧ ಸ್ಪರ್ಧೆ. ರಸಪ್ರಶ್ನೆ ಕಂಠಪಾಠ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಕಲ್ಪಿಸಿದೆ. ಈ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳಿಗೆ ತಾಲೂಕು ಮಟ್ಟದ ಕನ್ನಡ ಕುವರ ಕುವರಿ ಪ್ರಶಸ್ತಿ ನೀಡುವ ಕಾರ್ಯಕ್ರಮ ರಾಜ್ಯದಲ್ಲೇ ಪ್ರಥಮವಾಗಿದ್ದು ಸರ್ಕಾರ ಈ ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಿದ್ದು ಮಕ್ಕಳ ಸಾಹಿತ್ಯ ವೇದಿಕೆಯ ಸ್ವೀತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷರಾದ ಆಲೂರು ಹನುಮಂತರಾಯಪ್ಪ ನವರು ಮಾತನಾಡಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಗಮನಿಸಿದಾಗ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ಮಕ್ಕಳೇ ಪ್ರತಿಭಾವಂತರಾಗಿ ಮುಂದೆ ಬಂದಿದ್ದಾರೆ ಈ ನಿಟ್ಟಿನಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳ ಪರಿಶ್ರಮ ದಿಂದ ಕುಟುಂಬ. ಸಮಾಜ ಸಮುದಾಯ ಮನೆತನಕ್ಕೆ ಒಳ್ಳೆ ಹೆಸರು ಬರುತ್ತದೆ ಮಕ್ಕಳು ಇದನ್ನು ಉತ್ತಮ ಮಾರ್ಗದರ್ಶನದೊಂದಿಗೆ ಉನ್ನತ ವ್ಯಾಸಂಗ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾದ ಜೆ. ನಿಜಲಿಂಗಪ್ಪ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಎಂ. ಬಿ. ಜಯದೇವಮೂರ್ತಿ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಸಿ ಆರ್ ಏಕಾಂತಪ್ಪ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆಯ ತಾಲೂಕು ಘಟಕದ ಮಾಜಿ ಅಧ್ಯಕ್ಷರಾದ ಆರ್ ತಿಪ್ಪೇಸ್ವಾಮಿ. ಎಂ. ರಮೇಶ್ ನಾಯ್ಕ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸಿ. ರಾಮಚಂದ್ರಪ್ಪ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಹರ್ತಿ ಕೋಟೆ ಮಹಾಸ್ವಾಮಿ. ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಗೌರವ ಅಧ್ಯಕ್ಷರಾದ ಕಾಮಣ್ಣ. ತಾಲೂಕು ಮಕ್ಕಳ ಸಾಹಿತ್ಯ ವೇದಿಕೆಯ ಪ್ರಧಾನ ಕಾರ್ಯದರ್ಶಿ, ಬಿ.ಟಿ. ಶಂಕರ್ ಲಿಂಗಯ್ಯ. ಕೆ ಗುರುಸಿದ್ದಪ್ಪ. ಬಿ ಎಂ ಜನಾರ್ದನ ಶೆಟ್ಟಿ. ಎಂ.ಎಸ್ ಚಂದ್ರ ವದನ. ಸುಲೋಚನ. ಎಂ ಬಿ ನಾಗರತ್ನಮ್ಮ. ಪಿ ಎಮ್ ತಿಪ್ಪೇಸ್ವಾಮಿ. ಡಿ ದೇವರಾಜು ಮೂರ್ತಿ. ಸಿದ್ದಪ್ಪ. ಶಂಭುಲಿಂಗಯ್ಯ. ಲಕ್ಷ್ಮಣಪ್ಪ. ಶಾರದಮ್ಮ. ಎಂ.ಬಿ. ಲಿಂಗಪ್ಪ ಡಿಂಪಲ್ ಪಾಪಣ್ಣ. ಕೆ. ಪಿ.ಎಲ್ ಜಗದೀಶ್ ಯಾದವ್. ಮುಂತಾದವರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment