Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದವರ ನಡುವೆ ಚಿಗುರಿದ ಪ್ರೀತಿ : ಓಡಿ ಹೋಗಿ ಮದುವೆಯಾದ ಜೋಡಿ.!

---Advertisement---

ಸುದ್ದಿಒನ್,ಬೆಂಗಳೂರು,ಮೇ.08: ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಾದವರೇ ಪ್ರೀತಿಸಿ ಮದುವೆಯಾಗುವ ಮೂಲಕ ಸಮಾಜ ಹಾಗೂ ಕುಟುಂಬದ ಕೆಂಗಣ್ಣಿಗೆ ಗುರಿಯಾಗಿರುವ ಘಟನೆ ಜಿಲ್ಲೆಯಲ್ಲಿ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29) ಹಾಗೂ ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24) ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇವರಿಬ್ಬರೂ ಸಂಬಂಧದಲ್ಲಿ ಅಕ್ಕ-ತಮ್ಮನಾಗಬೇಕು ಎನ್ನಲಾಗಿದೆ. ಇವರ ಈ ಅಸಹಜ ಪ್ರೇಮ ಸಂಬಂಧಕ್ಕೆ ಎರಡೂ ಕುಟುಂಬಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮನೆಮಂದಿಯ ಆಕ್ಷೇಪ ಹಾಗೂ ಸಾಮಾಜಿಕ ಕಟ್ಟುಪಾಡುಗಳನ್ನು ಲೆಕ್ಕಿಸದ ಈ ಜೋಡಿ, ಇತ್ತೀಚೆಗೆ ಗುಟ್ಟಾಗಿ ಮದುವೆಯಾಗುವ ಮೂಲಕ ಒಂದಾಗಿದ್ದಾರೆ. ಶಶಿಕಲಾ ಅವರು ತನಗಿಂತ ಐದು ವರ್ಷ ಚಿಕ್ಕವನಾದ ಪ್ರವೀಣ್‌ನನ್ನು ಮದುವೆಯಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆಯೇ ಪೋಷಕರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಮದುವೆಯ ನಂತರ ಕುಟುಂಬ ಸದಸ್ಯರು ಮತ್ತು ಸಮಾಜದಿಂದ ತಮಗೆ ತೊಂದರೆಯಾಗುವ ಭೀತಿಯಲ್ಲಿರುವ ಈ ನವಜೋಡಿ ಈಗ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now