ಬೆಂಗಳೂರು.ಜುಲೈ.05: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮುಂಗಾರು ಮಳೆ ಮತ್ತಷ್ಟು ಚುರುಕಾಗಲಿದ್ದು, ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತವೇ ಈ ಹಠಾತ್ ಹವಾಮಾನ ಬದಲಾವಣೆಗೆ ಮುಖ್ಯ ಕಾರಣವಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜುಲೈ 9ರವರೆಗೆ ವರುಣನ ಅಬ್ಬರ ಮುಂದುವರಿಯಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಾತ್ರವಲ್ಲದೆ, ಒಳನಾಡಿನ ಬಹುತೇಕ ಜಿಲ್ಲೆಗಳಲ್ಲೂ ಧೋ ಎಂದು ಮಳೆ ಸುರಿಯಲಿದೆ.ವಾಯುಭಾರ ಕುಸಿತದ ತೀವ್ರತೆಯಿಂದಾಗಿ ಅರಬ್ಬಿ ಸಮುದ್ರದ ಪೂರ್ವ ಭಾಗದಲ್ಲಿ ತಲ್ಲಣ ಸೃಷ್ಟಿಯಾಗಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಲಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಿರಲಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಈ ಹವಾಮಾನ ವೈಪರೀತ್ಯದ ಪ್ರಭಾವ ಕೇವಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಉತ್ತರ ಭಾರತದ ಹಿಮಾಚಲ ಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲೂ ಮುಂದಿನ ದಿನಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಅಲ್ಲಿಯೂ ಹೈ ಅಲರ್ಟ್ ಘೋಷಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.







