Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹತ್ತನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ : ಶಿಕ್ಷಕರುಗಳ ಮೇಲೆ ಕ್ರಮಕ್ಕೆ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಹತ್ತನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದಿರುವ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತಾಲ್ಲೂಕು ಶಾಖೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಅನುದಾನಕ್ಕೆ ಒಳಪಟ್ಟಿರುವ ಪ್ರೌಢಶಾಲೆಗಳ ಸಹ ಶಿಕ್ಷಕರ ವಿಷಯವಾರು ಫಲಿತಾಂಶವನ್ನು ಪರಿಗಣಿಸಿ ಶೇ. 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಸಹ ಶಿಕ್ಷಕರನ್ನು ಗುರುತಿಸಿ ವಾರ್ಷಿಕ ವೇತನ ಬಡ್ತಿ ತಡೆಹಿಡಿಯುವುದು. ಅನುದಾನ ಪಡೆಯುತ್ತಿರುವ ವಿಷಯ ಶಿಕ್ಷಕರು ನಿರಂತರ ಮೂರು ವರ್ಷಗಳಲ್ಲಿ ಶೇ.60 ಕ್ಕಿಂತ ಕಡಿಮೆ ಫಲಿತಾಂಶ ನೀಡಿದಲ್ಲಿ ಅಂತಹ ವಿಷಯ ಶಿಕ್ಷಕರುಗಳ ವೇತಾನುದಾನವನ್ನು ತಡೆಹಿಡಿಯುವುದು ಹೀಗೆ ಹಲವಾರು ವಿಷಯಗಳ ಮೇಲೆ ಕ್ರಮ ಕೈಗೊಳ್ಳಲು ದಿನಾಂಕ : 30-5-2025 ರಂದು ನಿರ್ದೇಶಕರ ಸುತ್ತೋಲೆಯಂತೆ ಧಾರವಾಡ ಮತ್ತು ಕಲಬುರಗಿ ಆಯುಕ್ತಾಲಯ ವ್ಯಾಪ್ತಿಗೊಳಪಡುವ ಉಪ ನಿರ್ದೇಶಕರುಗಳಿಗೆ ಕ್ರಮ ವಹಿಸಲು ಸೂಚಿಸಲಾಗಿದೆ.
ಕಳಪೆ ಫಲಿತಾಂಶ ಬರುವುದಕ್ಕೆ ಕೇವಲ ಶಿಕ್ಷಕರುಗಳಷ್ಟೆ ಕಾರಣರಲ್ಲ. ವಿದ್ಯಾರ್ಥಿಗಳು ಬೆಳದು ಬಂದಿರುವ ಪರಿಸರ, ಪ್ರಾಥಮಿಕ ಹಂತದಲ್ಲಿ ಕಲಿತಿರುವ ಶಿಕ್ಷಣ, ಏಳನೆ ತರಗತಿಯವರೆಗೆ ಯಾವುದೇ ರೀತಿಯ ಗುಣಾತ್ಮಕ, ನಿರ್ಣಯಾತ್ಮಕ ಮಾನದಂಡಗಳ ಪರೀಕ್ಷೆಗಳು ಮೌಲ್ಯಮಾಪನ ಇಲ್ಲದಿರುವುದರಿಂದ ನೇರವಾಗಿ ಅಡೆತಡೆಗಳಿಲ್ಲದೆ ಕನಿಷ್ಠ ಎಫ್.ಎಲ್.ಎನ್. ಸಾಧಿಸದೆ ಉತ್ತೀರ್ಣರಾಗಿರುವ ಮಕ್ಕಳು ಎಂಟನೆ ತರಗತಿ ಪ್ರವೇಶ ಪಡೆಯುತ್ತಿದ್ದಾರೆ. ಪೋಷಕರು, ಆಡಳಿತ ಮಂಡಳಿ ಅಸಹಕಾರ ಒಳಗೊಂಡಂತೆ ಇನ್ನು ಅನೇಕ ಕಾರಣಗಳಿರುತ್ತವೆ. ಹಾಗಾಗಿ ಶಿಕ್ಷಕರುಗಳ ಮೇಲೆ ಕ್ರಮಕ್ಕೆ ಹೊರಡಿಸಿರುವ ಆದೇಶವನ್ನು ವಾಪಸ್ ಪಡೆಯುವಂತೆ ಸಹ ಶಿಕ್ಷಕರುಗಳು ಒತ್ತಾಯಿಸಿದರು.

ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಣ್ಣ, ತಾಲ್ಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀನಿವಾಸ್, ರಾಜ್ಯ ಪರಿಷತ್ ರಾಜಪ್ಪ ಎಸ್. ನಿರ್ದೇಶಕರಾದ ಮಂಜುನಾಥ್ ಡಿ. ಅನುದಾನಿತ ಮುಖ್ಯ ಶಿಕ್ಷಕರ ಸಂಘದ ಕೀರ್ತಿಕುಮಾರ್, ಡಾ.ಮಹೇಶ್, ದ್ವಾರಕನಾಥ್, ರಾಮಣ್ಣ, ನಿಜಲಿಂಗಪ್ಪ, ಶ್ರೀನಿವಾಸ್, ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...