ನವದೆಹಲಿ: ಸಿಲಿಂಡರ್ ಬೆಲೆ ಏರಿಕೆಯ ಬೆನ್ನಲ್ಲೇ ಅದರ ತೂಕ ಇಳಿಸಲು ಕೇಂದ್ರ ಸರ್ಕಾರ ಫ್ಲ್ಯಾನ್ ಮಾಡಿದೆ. ಸದ್ಯ 14.2 ಕೆಜಿ ಇದ್ದು ಅದರ ತೂಕವನ್ನ 5ಕೆಜಿಗೆ ಇಳಿಸಲು ಚಿಂತನೆ ನಡೆಸಿದೆ.
ಎಲ್ಪಿಜಿ ಸಿಲಿಂಡರ್ಗಳು ಭಾರವಾಗಿರುವುದರಿಂದ ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಲಾಪದಲ್ಲಿ ರಾಜ್ಯಸಭೆ ಸದಸ್ಯರೊಬ್ಬರು ಪ್ರಸ್ತಾಪಿಸಿ, 14.2 ಕೆಜಿ ತೂಕದ ಅಡುಗೆ ಅನಿಲದ ಸಿಲಿಂಡರ್ಗಳನ್ನು ಸಾಗಾಟ ಮಾಡಲು ಕಷ್ಟವಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಎಲ್ಪಿಜಿ ಸಿಲಿಂಡರ್ಗಳ ತೂಕವನ್ನು ಕಡಿಮೆ ಮಾಡಲು ನಿರ್ಧರಿಸಿದೆ.
ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಜನರ ಅನುಕೂಲಕ್ಕಾಗಿ ಗ್ಯಾಸ್ ಸಿಲಿಂಡರ್ ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಕೆಲವೊಮ್ಮೆ ಸಮಸ್ಯೆಯಾಗುತ್ತದೆ ಎಂದಿದ್ದಾರೆ.