ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.24 : ಯುವಕರಿಗೆ ದೇಶ ಸೇವೆ ಮಾಡಬೇಕು ಎಂಬ ಆಸೆ ಇರುತ್ತೆ. ಅಂತ ಆಸೆ ಇದ್ದರೆ ಅದಕ್ಕಿಂತ ಪುಣ್ಯ ಮತ್ತೊಂದಿಲ್ಲ. ಆದರೆ ದೇಶಸೇವೆ ಮಾಡುವ ಕೆಲಸದಲ್ಲೂ ಮೋಸ ಮಾಡುವವರು ಹುಟ್ಟಿಕೊಂಡಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ, ಒಂದಲ್ಲ ಎರಡಲ್ಲ 150 ಜನ ಯುವಕರಿಗೆ ಮೋಸ ಮಾಡಿದ್ದಾನೆ.

ಸುಮಾರು 1 ಕೋಟಿ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮೋಸ ಮಾಡಿದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾನೆ. ಸೇನೆಗೆಂದು ಸೇರಲು ಬಯಸುವ ಯುವಕರಿಗೆ, ಶಿವರಾಜ್ ವಟಗಲ್, ತಾನೂ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಸುಳ್ಳು ಹೇಳಿ ನಂಬಿಸುತ್ತಿದ್ದನು. ಅಷ್ಟೇ ಅಲ್ಲ ಯುವಕರನ್ನು ನಂಬಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದನು. ಈ ದಾಖಲೆಗಳನ್ನು ಯುವಕರಿಗೆ ತೋರಿಸಿ ನಂಬಿಸುತ್ತಿದ್ದನು. ಭಾರತೀಯ ಸೇನೆ, ವಾಯುಸೇನೆ ಮತ್ತು ನೌಕಾಪಡೆಯಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ಶಿವರಾಜ್ ವಟಗಲ್ 150 ಯುವಕರಿಗೆ 1 ಕೋಟಿ ರೂಪಾಯಿ ವಂಚಿಸಿದ್ದನು.
ಈತನಿಂದ ವಂಚನೆಗೆ ಒಳಗಾದ ಪ್ರಕಾಶ್ ಎಂಬುವರು ಶಿವರಾಜ್ ವಟಗಲ್ ವಿರುದ್ಧ ಚಿತ್ರದುರ್ಗದ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ಜಂಟಿಯಾಗಿ ಕಾರ್ಯಾಚರಣೆ ಇಳಿದಿತ್ತು. ಅಕ್ಟೋಬರ್ 20 ರಂದು ಮಿಲಿಟರಿ ಗುಪ್ತಚರ, ಬೆಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಪೊಲೀಸ್ ತಂಡವು ಜಂಟಿ ಕಾರ್ಯಾಚರಣೆ ನಡೆಸಿ ಚಿತ್ರದುರ್ಗದಲ್ಲಿ ವಂಚಕ ಶಿವರಾಜ್ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿದರು.
ಈತ ದಾವಣಗೆರೆ, ಚಿತ್ರದುರ್ಗ ಮಾತ್ರವಲ್ಲದೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ವಂಚನೆ ಮಾಡಿರುವುದು ಬಯಲಾಗಿದೆ. ಈ ಸಂಬಂಧ ಶಿವರಾಜ್ ಮತ್ತು ಆತನ ಸಂಗಾತಿ ಬೀಮವ್ವ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಶಿವರಾಜ್ ನಕಲಿ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್