Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಎಂ.ಎ. ಸಲೀಂ ನೇಮಕ

---Advertisement---

 

ಬೆಂಗಳೂರು, ಆಗಸ್ಟ್. 30 : ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಾದ ಪೊಲೀಸ್ ಮಹಾನಿರ್ದೇಶಕರನ್ನಾಗಿ (DGP) ಎಂ. ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಎಂ. ಎ. ಸಲೀಂ ಅವರು ತಕ್ಷಣದಿಂದಲೇ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕರಿಸುವಂತೆ ಸೂಚಿಸಿದೆ. ಹೀಗಾಗಿ, ಅವರು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ.

1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಇವರು ಡಿಜಿಪಿ ಅಲೋಕ್ ಮೋಹನ್ ಅವರು ನಿವೃತ್ತರಾದ ನಂತರ ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ಕಳೆದ ಮೇ 21, 2025ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರು 2026ರ ಜೂನ್‌ನಲ್ಲಿ ನಿವೃತ್ತರಾಗಲಿದ್ದು, ಸುಮಾರು ಒಂದು ವರ್ಷಗಳ ಕಾಲ ಅಧಿಕಾರ ನಿರ್ವಹಿಸಲಿದ್ದಾರೆ. ಡಾ. ಎಂ.ಎ. ಸಲೀಂ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಮತ್ತು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್ (CID) ನ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment