ಸುದ್ದಿಒನ್, ಚಿತ್ರದುರ್ಗ.ಅಕ್ಟೋಬರ್.20: ಮೈಸೂರು ವಿಶ್ವವಿದ್ಯಾನಿಲಯದ 103ನೇ ಘಟಿಕೋತ್ಸವದಲ್ಲಿ ಚಿತ್ರದುರ್ಗ ನಗರದ ಸಿ.ಎಂ.ಚೈತನ್ಯ ಅವರು ಎಂ.ಕಾಂ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದು ಮೂರು ಚಿನ್ನದ ಪದಕ ಹಾಗೂ ಎರಡು ನಗದು ಬಹುಮಾನ ಪಡೆದಿದ್ದಾರೆ.
ಸಿ.ಎಂ.ಚೈತನ್ಯ ಅವರು 2019-20ನೇ ಸಾಲಿನಲ್ಲಿ ಬಿ.ಕಾಂ.ಪದವಿಯಲ್ಲೂ ದಾವಣಗೆರೆ ವಿಶ್ವವಿದ್ಯಾಲಯದಿಂದ ಪ್ರಥಮ ರ್ಯಾಂಕಿನೊಂದಿಗೆ ಎರಡು ಚಿನ್ನದ ಪದಕ ಪಡೆದಿದ್ದರು. 2016-17ನೇಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾಣಿಜ್ಯಶಾಸ್ತ್ರದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದರು.
ಸಿ.ಎಂ.ಚೈತನ್ಯ ಅವರ ತಂದೆ ಡಾ.ಸಿ.ಚನ್ನಕೇಶವ ಅವರು ಚಿತ್ರದುರ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಾಯಿ ಪಿ.ಕೆ.ಮಂಜುಳಾ ಅವರು ಚಿತ್ರದುರ್ಗದ ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












