Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಎಂ.ಡಿ.ಆಶ್ವಕ್ ಆಲಿ ನೇಮಕ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಸೆ. 29 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಚಿತ್ರದುರ್ಗ ಜಿಲ್ಲಾ ಸಮಿತಿಗೆ ಉಪಾಧ್ಯಕ್ಷರಾಗಿ ಎಂ.ಡಿ.ಆಶ್ವಕ್ ಆಲಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾದ್ಯಕ್ಷರಾದ ಬಿ.ಸಿ.ಚಂದ್ರೇಶೇಖರ್ ರವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ಎಂ.ಕೆ.ತಾಜ್ ಪೀರ್ ರವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಅವರಿಗೆ ನೇಮಕಾತಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಜ್ ಪೀರ್ ಈಗ ನೇಮಕಾತಿ ಪತ್ರವನ್ನು ಪಡೆದು ಮನೆಯಲ್ಲಿ ಇರದೆ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವತ್ತಾ ಗಮನ ನೀಡಬೇಕಿದೆ ಇವರು ಎನ್.ಎಸ್.ಯು.ಐ, ಹಾಗೂ ಯುವ ಕಾಂಗ್ರೆಸ್‍ನಲ್ಲಿ ಕೆಲಸ ಮಾಡಿದ ಅನುಭವ ಇದೆ, ಇಂತಹರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ಉತ್ತಮವಾಗಿದೆ, ಪಕ್ಷದ ಸಂಘಟನೆಯಲ್ಲಿ ತೂಡಗುವಂತೆ ಕರೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡ ಎಂ.ಡಿ.ಆಶ್ವಕ್ ಆಲಿ ಮಾತನಾಡಿ ನನ್ನನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಉಪಾಧ್ಯಕ್ಷರಾಗಿ ನೇಮಕ ಮಾಡಿರುವುದು ನನಗೆ ಸಂತೋಷವನ್ನು ತಂದಿದೆ, ನನಗೆ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ ಅನುಭವ ಇದೆ, ಮುಂದಿನ ದಿನಮಾನದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವತ್ತ ಗಮನ ನೀಡಲಾಗುವುದಲ್ಲದೆ ಮುಂಬರುವ ಜಿ.ಪಂ.ತಾ.ಪಂ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಇತರೆ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವುವಿಗೆ ಸಹಕಾರಿಯಾಗಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ರವಿಕುಮಾರ್, ಮಂಜುನಾಥ್ ಗುಪ್ತ, ವೆಂಕಟೇಶ್, ಖುದ್ದುಸ್, ಮಲ್ಲಿಕಾರ್ಜನ್, ನವಾಬ್, ಸಾಧಿಕ್, ಸಂತೋಷ್ ಕಲ್ಲಹಳ್ಳಿನ ರಘು, ವಾಸಿಂ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...