ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್,ಚಿತ್ರದುರ್ಗ, (ಆ.08) : ಮೆದೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಂ.ಜಿ.ಜಯರಾಮರೆಡ್ಡಿ, ಉಪಾಧ್ಯಕ್ಷೆಯಾಗಿ ಬಿ.ಆರ್.ಲೀಲಾವತಿ ಶಿವಮೂರ್ತಿ ಇವರುಗಳು ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂ.ಜಿ.ಜಯರಾಮರೆಡ್ಡಿ 12 ಮತಗಳನ್ನು ಪಡೆದು ಜಯಶಾಲಿಯಾದರೆ ಎದುರಾಳಿ ಆರ್.ನಿರಂಜನ್ 9 ಮತಗಳನ್ನು ಪಡೆದು ಪರಾಭವಗೊಂಡರು.
ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಲೀಲಾವತಿ ಶಿವಮೂರ್ತಿ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹನುಮಂತಪ್ಪ ಚುನಾವಣಾಧಿಕಾರಿಯಾಗಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಎಂ.ಸಿ. ಶಂಕರ್, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.