Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಎಂ. ಜಯಣ್ಣನವರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಆ. 10 : ನಗರಕ್ಕೆ ಶನಿವಾರ ಆಗಮಿಸಿದ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ,) ಬೆಂಗಳೂರು. ರಾಜ್ಯ ಸಂಘದ ನಿಕಟಪೂರ್ವ ಖಜಾಂಚಿ ಎಂ. ಜಯಣ್ಣ ರವರ ಸೇವೆಯನ್ನು ಗುರುತಿಸಿ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣರವರು ಎಂ.ಜಯಣ್ಣನಮ್ಮ ರಾಜ್ಯ ಸಂಘಟನೆ ಯಲ್ಲಿ ಸುದೀರ್ಘ 13 ವರ್ಷಗಳ ಕಾಲ ನಿರಂತರವಾಗಿ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದಾರೆ. ಇವರು ರಾಜ್ಯ ಸಂಘದಲ್ಲಿ ಹಣ ಇದ್ದಾಗ ಹಣವಿಲ್ಲದೆ ಇದ್ದಾಗ ರಾಜ್ಯ ಸಂಘ ಕೈಗೊಳ್ಳುವ ಎಲ್ಲಾ ಹೋರಾಟ ಮತ್ತು ಕಾರ್ಯಕ್ರಮಗಳಿಗೆ ಯಾವುದೇ ರೀತಿಯ ಹಣಕಾಸು ತೊಂದರೆಯಾಗದಂತೆ ನಿಭಾಯಿಸುತ್ತಿದ್ದರು ಎಂದರು.

ಈ ಹಿಂದೆ ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆಗಾಗಿ 18 ದಿನಗಳ ಕಾಲ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ರಾಜ್ಯ ಉಪನ್ಯಾಸಕರ ಸಂಘ ಹಮ್ಮಿಕೊಂಡಿದ್ದ ಅನಿರ್ದಿಷ್ಟ ಕಾಲ ಮುಷ್ಕರವನ್ನು ಹಾಗೂ ಮುಷ್ಕರಕ್ಕೆ ತಗಲುವ ಹಣಕಾಸು ವ್ಯವಸ್ಥೆಯ ಬಗ್ಗೆ ಈ ಸಮಯದಲ್ಲಿ ಜ್ಞಾಪಿಸಿ. ಆ ಸಮಯದಲ್ಲಿನ ಜಯಣ್ಣ ರವರ ಹಣಕಾಸು ಸೇವೆಯನ್ನು ಸ್ಮರಿಸಿದರು.ಇವರು ಮುಂದಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ದೂರ ಶಿಕ್ಷಣ ಕಲ್ಪಿಸಬೇಕೆಂಬ ಗುರಿಯನ್ನಿ ಟ್ಟುಕೊಂಡಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿದ ಮಾತನಾಡಿ. ಎಂ.ಜಯಣ್ಣ ಲಕ್ಷ್ಮಣ ಮತ್ತು ನಾನು ಸಂಘದಲ್ಲಿ ಸುಮಾರು ವರ್ಷಗಳಿಂದ ತುಂಬಾ  ಒಡನಾಡಿಗಳು.ಅವರು ರಾಜ್ಯ ಸಂಘದ ಸಹ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷರಾಗಿ  ಅವರ ಸೇವ ಅವಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಇವರು ಅರೆಕಾಲಿಕ ಉಪನ್ಯಾಸಕರ ಸೇವೆ ಖಾಯಂಗೊಳಿಸುವುದಕ್ಕಾಗಿ ಮತ್ತು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆಗಾಗಿ  ನಿರಂತರವಾಗಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ  ಉತ್ತಮ ಹೋರಾಟಗಾರರಾಗಿ ಕೆಲಸ ನಿರ್ವಹಿಸಿದ್ದಾರೆ. ಇವರು ರಾಜ್ಯ ಉಪನ್ಯಾಸಕರ ಸಂಘ ಕೈಗೊಳ್ಳುವ ಯಾವುದೇ ಹೋರಾಟ, ಮುಷ್ಕರ ಮತ್ತು ಸಭೆ ಸಮಾರಂಭಗಳಿಗೆ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಇವರ ಸೇವೆ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ರಂಗಸ್ವಾಮಿ, ವಿನಯ್, ಚೈತ್ರ ಕುಮಾರ್ ,ರಂಗಸ್ವಾಮಿ ಇತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment