ನ.9 ರಂದು ಎಂ.ಜಯಣ್ಣನವರ ಪ್ರಥಮ ವರ್ಷದ ಪುಣ್ಯಸ್ಮರಣೆ

suddionenews
1 Min Read

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್, ಚಿತ್ರದುರ್ಗ, (ನ.06) : ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾಮೇಲ್ದಂಡೆ ಯೋಜನೆ ಜಾರಿಗಾಗಿ ಅವಿರತ ಹೋರಾಟ ನಡೆಸಿದ ಹುಟ್ಟು ಹೋರಾಟಗಾರ, ದಲಿತ ನಾಯಕ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಪ್ರಶಸ್ತಿ ಪುರಸ್ಕøತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾಗಿದ್ದ ಎಂ.ಜಯಣ್ಣನವರ ಪ್ರಥಮ ವರ್ಷದ ಪುಣ್ಯಸ್ಮರಣೆ ನ.9 ರಂದು ಬೆಳಿಗ್ಗೆ 11 ಕ್ಕೆ ಐ.ಯು.ಡಿ.ಪಿ.ಲೇಔಟ್‍ನ ಗಣಪತಿ ದೇವಸ್ಥಾನದ ಹತ್ತಿರವಿರುವ ಅವರ ನಿವಾಸ ಭೀಮಸದನದಲ್ಲಿ ನಡೆಯಲಿದೆ.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಆಂಜನೇಯ, ವಿವಿಧ ಮಠಾಧೀಶರುಗಳು ಪುಣ್ಯಸ್ಮರಣೆಯಲ್ಲಿ ಭಾಗವಹಿಸಲಿದ್ದಾರೆ.
ಹೋರಾಟಗಾರರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಎಂ.ಜಯಣ್ಣನವರ ಪುತ್ರ ಪ್ರಸನ್ನ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *