Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಚಿವ ಎಚ್.ಆಂಜನೇಯಗೆ ಮಾಚಿದೇವ ರತ್ನ ಪ್ರಶಸ್ತಿ ಪ್ರದಾನ

Facebook
Twitter
Telegram
WhatsApp

ಚಿತ್ರದುರ್ಗ, (ಮಾ.27) : ದೇಶ ಸರ್ವ ಕ್ಷೇತ್ರದಲ್ಲೂ ಪ್ರಗತಿ ಸಾಧಿಸಲು ಸೇವಾ ಮನಸ್ಸಿನ ಜನಪ್ರತಿನಿಧಿಗಳು ಸಮಾಜಕ್ಕೆ ಬಹಳ ಅಗತ್ಯ ಎಂದು ಶ್ರೀ ಬಸವ ಮಾಚಿದೇವ ಸ್ವಾಮೀಜಿ ಹೇಳಿದರು.

ಮಡಿವಾಳ ಗುರುಪೀಠದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ಮಾಚಿದೇವ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

2022ರಲ್ಲಿ ಸಿದ್ದರಾಮಯ್ಯ ಅವರಿಗೆ ಮಾಚಿದೇವ ಶ್ರೀ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಎಚ್.ಆಂಜನೇಯ ಅವರಿಗೂ ಪ್ರಶಸ್ತಿ ಪ್ರದಾನ ಮಾಡಬೇಕಿತ್ತು. ಆದರೆ, ಅವರು ತುರ್ತು ಕೆಲಸದ
ಹಿನ್ನೆಲೆಯಲ್ಲಿ ಪಾಲ್ಗೊಂಡಿರಲಿಲ್ಲ. ಆದ್ದರಿಂದ ಇಂದು ಸರಳ ಸಮಾರಂಭ ಆಯೋಜಿಸಿ
ವಿತರಿಸಲಾಗುತ್ತಿದೆ ಎಂದರು.

ಸಾಮಾನ್ಯ ಕುಟುಂಬದಿಂದ ಬಂದ ಎಚ್.ಆಂಜನೇಯ ತಮ್ಮ ಸಂಘಟನಾ ಶಕ್ತಿ ಮೂಲಕ ಐದು ವರ್ಷ ಸಮಾಜ
ಕಲ್ಯಾಣ ಸಚಿವರಾಗಿ ಅನೇಕ ಜನಪರ ಕಾರ್ಯ ಮಾಡಿದ್ದಾರೆ. ಎಸ್ಸಿ, ಎಸ್ಟಿ ಅನುದಾನ ಬಳಕೆ ಕಾಯ್ದೆ ಸೇರಿ ವಿವಿಧ ಕೆಲಸಗಳನ್ನು ಮಾಡಿದ್ದಾರೆ ಎಂದು ಹೇಳಿದರು.
ಯಾವುದೇ ಅಪೇಕ್ಷೆ ಇಲ್ಲದೆ ಮಠ-ಮಾನ್ಯಗಳಿಗೆ ಕೋಟ್ಯಂತರ ರೂ. ಅನುದಾನ ನೀಡಿದ್ದಾರೆ.

ನೂರಾರು ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮೂಲಕ ಎಲ್ಲ ವರ್ಗದ ಬಡ ಮಕ್ಕಳ ಶೈಕ್ಷಣಿಕ
ಪ್ರಗತಿಗೆ ಶ್ರಮಿಸಿದ್ದಾರೆ. ಅವರ ಈ ಸೇವೆ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ
ಎಂದರು.

ಎಚ್. ಆಂಜನೇಯ ಅವರಿಗೆ ಆರೋಗ್ಯ, ಆಯುಷ್ಯ ಜತೆಗೆ ಸೇವೆ ಮಾಡುವ ಶಕ್ತಿಯನ್ನು ಬಸವಾದಿ ಶರಣರು ದಯಪಾಲಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಎಚ್.ಆಂಜನೇಯ, ಮಡಿವಾಳ, ಯಾದವ, ನಾಯಕ, ಲಿಂಗಾಯತ,
ಲಂಬಾಣಿ, ಕುಂಚಿಟಿಗ ಸೇರಿ ಎಲ್ಲ ಸಮುದಾಯಗಳ ಪ್ರಗತಿಗೆ ನನ್ನ ಅಧಿಕಾರವಧಿಯಲ್ಲಿ ಅನುದಾನ ನೀಡಿದ್ದೇನೆ ಎಂದರು.

ಅನೇಕ ಸಮುದಾಯಗಳು ಶೈಕ್ಷಣಿಕ ಪ್ರಗತಿ ಜತೆಗೆ ರಾಜಕೀಯ ಸ್ಥಾನಮಾನ ಪಡೆಯುವ ತುರ್ತು ಇದೆ. ಈ ನಿಟ್ಟಿನಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಮಠಾಧೀಶರು ತಮ್ಮ ಸಮುದಾಯದ
ರಾಜಕಾರಣಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.

ಮುಖ್ಯವಾಗಿ ಕುಲಕಸುಬು ಮಾಡುವರು ಆಧುನೀಕ ಸೌಲಭ್ಯ ಬಳಸಿಕೊಳ್ಳಬೇಕು. ಜೊತೆಗೆ ಮಕ್ಕಳನ್ನು ಅಕ್ಷರವಂತರನ್ನಾಗಿಸಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಸ್ವಾಮೀಜಿ ಅವರು ಜನಜಾಗೃತಿ ಮೂಡಿಸುತ್ತಿರುವುದು ಮಾದರಿ ಕಾರ್ಯ ಆಗಿದೆ ಎಂದು ಮೆಚ್ಚುಗೆ
ವ್ಯಕ್ತಕಪಡಿಸಿದರು.

ಮಡಿವಾಳರು ನೊಂದ ಸಮುದಾಯ. ಪರೋಕ್ಷವಾಗಿ ಅಸ್ಪಶ್ಯ ನೋವು ಅನುಭವಿಸುತ್ತಿದ್ದಾರೆ. ಈ
ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕೆಂಬ ಬೇಡಿಕೆ ದಶಕದಿಂದಲೂ ಇದೆ. ಆದರೆ,ಅದು ಕಷ್ಟಸಾಧ್ಯ. ಆದ್ದರಿಂದ ಈ ಸಮುದಾಯಕ್ಕೆ ಎಸ್ಸಿ ಮೀಸಲು ಸೌಲಭ್ಯ ಸಂಪೂರ್ಣ ದೊರೆಯುವ ರೀತಿ ಪ್ರತ್ಯೇಕ ವರ್ಗ ರಚಿಸಬೇಕು.

ಈ ಮೂಲಕ ಶೋಷಿತ ಜನರನ್ನು
ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕಿದೆ. ಈ ಸಂಬಂಧ ಒತ್ತಡ ತರುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ದಾವಣಗೆರೆ, ಹೊಳಲ್ಕೆರೆ, ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಡಿವಾಳ ಸಮುದಾಯ
ಭವನಕ್ಕೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮೂರು ಕೋಟಿ ರೂ. ಅನುದಾನ ನೀಡಲಾಗಿದ್ದು, ಇನ್ನೂ ಹೆಚ್ಚು ಕೆಲಸ ಮಾಡುವ ಅಗತ್ಯ ಇದೆ. ಮುಂದಿನ ದಿನಗಳಲ್ಲಿ ಸಮುದಾಯದ ಶೈಕ್ಷಣಿಕ
ಪ್ರಗತಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮಡಿವಾಳ ಸಮಾಜದ ಮುಖಂಡರಾದ ಸಿದ್ದಲಿಂಗಪ್ಪ, ಸಂಗಮೇಶ, ಈಶಣ್ಣ, ಶಿವಪ್ಪ, ಕಾಟಪ್ಪ, ಬಸವರಾಜ್ ಇತರರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!