Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮದಕರಿ ವ್ಯಾಯಾಮ ಶಾಲೆಯನ್ನು ಕೆಡವಿ ಅಂಗನವಾಡಿ ಕಟ್ಟುವುದು ಬೇಡ : ಎನ್.ಡಿ.ಕುಮಾರ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 19 : ಹಳೆ ಮಾಧ್ಯಮಿ ಶಾಲಾ ಆವರಣದಲ್ಲಿದ್ದ ಹಳೆಯ ಮದಕರಿ ವ್ಯಾಯಾಮ ಶಾಲೆಯನ್ನು ಕೆಡವಿ ಆ ಸ್ಥಳದಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಹೊರಟಿರುವುದನ್ನು ವಿರೋಧಿಸಿ ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾಪುಟು ಎನ್.ಡಿ.ಕುಮಾರ್ ನೇತೃತ್ವದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.


1942 ರಿಂದ ಇಲ್ಲಿದ್ದ ವ್ಯಾಯಾಮ ಶಾಲೆ ಕಟ್ಟಡಕ್ಕೆ ತನ್ನದೆ ಆದ ಖಾತೆ ಮತ್ತು ವಿದ್ಯುತ್ ಸಂಪರ್ಕವಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯಾಯಾಮ ಶಾಲೆಯನ್ನು ಕೆಡವಿದಾಗ ತಡೆಯಾಜ್ಞೆ ತಂದಿದ್ದೇವೆ. ಶಾಸಕರ ನೇತೃತ್ವದಲ್ಲಿ ವ್ಯಾಯಾಮ ಶಾಲೆಯನ್ನು ಪುನರಾರಂಭಿಸಲು ಮುಂದಾಗಿದ್ದು, ಇದರ ನಡುವೆ ಸಿಡಿಪಿಓ. ಇಲಾಖೆ ವತಿಯಿಂದ ಅಂಗನವಾಡಿ ಕಟ್ಟಡ ಕಟ್ಟಲು ಹೊರಟಿರುವುದಕ್ಕೆ ಅವಕಾಶ ನೀಡಬಾರದೆಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ರಾಷ್ಟ್ರಮಟ್ಟದ ಬಾಡಿ ಬಿಲ್ಡರ್‍ಗಳಾದ ಅಣ್ಣಪ್ಪ, ದಿಲೀಪ್, ರುದ್ರೇಶ್, ಸೈಯದ್ ಮೊಹಿದ್ದೀನ್, ಬಸವರಾಜ್, ಗುರುರಾಜ್, ಸೈಫುಲ್ಲಾ, ವಾಸೀಂ, ನಾಗರಾಜ್, ಸಮೀವುಲ್ಲಾ ಹಾಗೂ ಜಿತೇಂದ್ರ ಇವರುಗಳು ಪತ್ರಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment