ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಅ. 10 : ಅಕ್ಟೋಬರ್ 13 ರಂದು ನಡೆಯಬೇಕಿದ್ದ ಮದಕರಿನಾಯಕ ಜಯಂತಿಯನ್ನು ನಮ್ಮ ಸಮುದಾಯದ ಶ್ರೀಗಳು ಅನಾರೋಗ್ಯದ ಹಿನ್ನೆಲೆಯಲ್ಲಿ ಜಯಂತಿಯನ್ನು ಅಕ್ಟೋಬರ್ 26 ರ ಭಾನುವಾರ ನಡೆಸಲು ಚಿತ್ರದುರ್ಗ ಜಿಲ್ಲಾ ವಾಲ್ಮೀಕಿ ಸಮಾಜದ ತೀರ್ಮಾನಿಸಿದೆ ಎಂದು ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷವು ಅಕ್ಟೋಬರ್ 13 ರಂದೇ ಮದಕರಿ ನಾಯಕರ ಜಯಂತಿಯನ್ನು ಆಚರಿಸಿಕೊಂಡ ಬರಲಾಗುತ್ತಿತ್ತು ಆದರಂತೆ ಈ ವರ್ಷವು ಸಹಾ ಅಚರಣೆ ಮಾಡಲು ಸಕಲ ಸಿದ್ದತೆಗಳನ್ನು ನಡೆಸಲಾಗಿತ್ತು. ಆದರೆ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಜಯಂತಿ ಆಚರಣೆಗೆ ಮೆರುಗು ತುಂಬುವುದಿಲ್ಲ ಎಂಬ ಕಾರಣಕ್ಕೆ ಜಯಂತಿಯನ್ನು ಮುಂದೂಡಲಾಗಿದೆ ಎಂದರು.
ಬೇರೆ ಜನಾಂಗದಲ್ಲಿ ಹಲವಾರು ಸ್ವಾಮೀಜಿಗಳು ಇದ್ದಾರೆ ಆದರೆ ವಾಲ್ಮೀಕಿ ಸಮಾಜದಲ್ಲಿ ಒಬ್ಬರು ಮಾತ್ರ ಶ್ರೀಗಳು ಇದ್ದು ಅವರನ್ನು ಬಿಟ್ಟು ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ. ಜಯಂತಿ ಆಚರಣೆಗೆ ವಿವಿಧ ಮಠಾಧೀಶರು ಆಗಮಿಸುವುದಾಗಿ ತಿಳಿಸಿದ್ದರು, ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಜಯಂತಿಯನ್ನು 26 ಕ್ಕೆ ಮುಂದುಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಲಿಂಗವ್ವನಾಗತಿ ಹಳ್ಳಿ ತಿಪ್ಪೇಸ್ವಾಮಿ, ಎ.ಟಿ.ತಿಪ್ಪೇಸ್ವಾಮಿ, ಪ್ರಶಾಂತ್ ನಾಯಕ್, ಬಸವರಾಜ್, ಬಿ.ಮಂಜಿನಾಥ್, ಗುಡುದೇಶ್ವರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್