ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿರವರ ಜನ್ಮದಿನದ ಪ್ರಯುಕ್ತ ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯಿಂದ ಬಾಬು ಜಗಜೀವನರಾಮ್ ನಗರದ ದುರ್ಗಾಂಬಿಕ ದೇವಸ್ಥಾನದ ಬಳಿ ಸಸಿಗಳನ್ನು ನೆಟ್ಟು ಜನತೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಮಾಳಪ್ಪನಹಟ್ಟಿ ಸಮೀಪವಿರುವ ತೀಕ್ಷ್ಣ ಅಂಧರ ಶಾಲೆಯಲ್ಲಿ ಮಕ್ಕಳಿಗೆ ಬೆಳಗಿನ ಉಪಹಾರ ವಿತರಿಸಿ ನಂತರ ಜಾಲಿಕಟ್ಟೆ ಗ್ರಾಮದಲ್ಲಿ ಸರ್ಕಾರಿ ಶಾಲಾ ಆವರಣವನ್ನು ಸ್ವಚ್ಚಗೊಳಿಸಲಾಯಿತು.

ಶಿವಶರಣ ಮಾದಾರ ಚನ್ನಯ್ಯ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಕೆ.ಎಂ.ಪರಶುರಾಮ್, ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್.ಮೋಹನ್, ಮಠದ ಆಡಳಿತಾಧಿಕಾರಿ ರಾಘವೇಂದ್ರ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಅನಿಲ್‍ಕುಮಾರ್ ಎಂ.ಎನ್. ತಾಲ್ಲೂಕು ಅಧ್ಯಕ್ಷ ದೇವರಾಜ್, ಯುವ ಸಮಿತಿಯ ಜಿಲ್ಲಾಧ್ಯಕ್ಷ ಗೌತಮ್‍ಜಾಲಿ, ಭಾನುಮೂರ್ತಿ, ಪ್ರೊ.ನಾಗರಾಜ್, ರಾಜ್ಯ ಮಹಿಳಾ ಕಾರ್ಯದರ್ಶಿ ನವನೀತ, ಮಂಜುಳಸ್ವಾಮಿ, ಅಂಬಿಕಾ, ರವಿ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.










