ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಮಾ.02) : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮಾಳಪ್ಪನಹಟ್ಟಿ ಸಮೀಪವಿರುವ ತೀಕ್ಷ್ಣ ಅಂಧರ ಪುನಃಶ್ಚೇತನ ಶಾಲೆ ಹಾಗೂ ಕಬೀರಾನಂದಾಶ್ರಮದ ವೃದ್ದಾಶ್ರಮದಲ್ಲಿ ಗುರುವಾರ ಬ್ರೆಡ್ ಹಾಗೂ ಹಣ್ಣುಗಳನ್ನು ವಿತರಿಸಲಾಯಿತು.

ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್ ಬ್ರೆಡ್ ಹಣ್ಣುಗಳನ್ನು ವಿತರಿಸಿ ಮಾತನಾಡುತ್ತ ಹುಟ್ಟುಹಬ್ಬವೆಂದರೆ ಅದ್ದೂರಿಯಾಗಿ ಆಚರಿಸಿಕೊಳ್ಳುವ ಬದಲು ಅನಾಥ ಅಂಧ ಮಕ್ಕಳು ಹಾಗೂ ವೃದ್ದರ ಜೊತೆ ಆಚರಿಸಿಕೊಳ್ಳುವುದರಲ್ಲಿ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದು ಹೇಳಿದರು.
ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಕಿರಣ್‍ಕುಮಾರ್ ಯಾದವ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಅನಾಥರು ವೃದ್ದಾಶ್ರಮ ಸೇರುತ್ತಿರುವುದು ಜಾಸ್ತಿಯಾಗುತ್ತಿರುವುದು ನೋವಿನ ಸಂಗತಿ. ಹಾಗಾಗಿ ಮಧು ಬಂಗಾರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಅಂಧರು, ಅನಾಥರಿಗೆ ಹಣ್ಣು ಬ್ರೆಡ್‍ಗಳನ್ನು ವಿತರಿಸುತ್ತಿದ್ದೇವೆ. ಯಾರು ಅನಾಥರಲ್ಲಿ ಪ್ರಕೃತಿ ಎಲ್ಲರನ್ನು ಸಲಹುತ್ತದೆ ಎಂದರು.
ಕರ್ನಾಟಕ ಪ್ರದೇಶ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಹೆಚ್.ಆಂಜನೇಯ, ಜಿಲ್ಲಾ ಉಪಾಧ್ಯಕ್ಷ ವಸಂತ್, ಚಿತ್ರದುರ್ಗ ಬ್ಲಾಕ್ ಅಧ್ಯಕ್ಷ ಚರಣ್‍ಬಾಬು, ಸಿ.ಜಿ.ಓಬಳಪ್ಪ, ತೀಕ್ಷ್ಣ ಅಂಧರ ಪುನಃಶ್ಚೇತನ ಸಂಸ್ಥೆ ಕಾರ್ಯದರ್ಶಿ ಕೌಶಲ್ಯ ಇನ್ನು ಮುಂತಾದವರು ಈ ಸಂದರ್ಭದಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್