Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗದಲ್ಲಿ ನಾಳೆ ಮಾದಿಗ ಮುನ್ನೆಡೆ ಆತ್ಮಗೌರವ ಸಮಾವೇಶ : ಹಲವು ಗಣ್ಯರು ಭಾಗಿ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.17 :  ಜಿಲ್ಲೆಯ ಮಾದಿಗ, ಸಮಗಾರ, ಮೋಚಿ, ಡೋರ್, ಡಕ್ಕಲಿಗ, ಬಂಗಿ, ಇತ್ಯಾದಿ ಮಾದಿಗ ಸಮಾಜದವರಿಂದ 

ಡಿಸೆಂಬರ್ 18 ರ ಸೋಮವಾರ ಬೆಳಿಗ್ಗೆ 11:00 ಗಂಟೆಗೆ ತ.ರಾ.ಸು. ರಂಗಮಂದಿರದಲ್ಲಿ ಜಿಲ್ಲಾ ಮಾದಿಗ ಮುನ್ನೆಡೆ ಆತ್ಮಗೌರವ ಸಮಾವೇಶವನ್ನು  ಆಯೋಜಿಸಲಾಗಿದೆ.

ಈ ಸಮಾವೇಶದ ದಿವ್ಯ ಸಾನಿಧ್ಯವನ್ನು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಹಿಸುವರು. ಉದ್ಘಾಟನೆಯನ್ನು ಮಾಜಿ ಸಚಿವ ಗೋವಿಂದ ಕಾರಜೋಳ ಮಾಡುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮತ್ತು ದುರ್ಯೋಧನ ಐಹೊಳೆ ಭಾಗವಹಿಸುವರು. ಅಧ್ಯಕ್ಷತೆಯನ್ನು ಪ್ರೊ. ಲಿಂಗಣ್ಣ ವಹಿಸಿವರು.

ಈ ಕಾರ್ಯಕ್ರಮದಲ್ಲಿ ಲಕ್ಷ್ಮಿ ನಾರಾಯಣ, ಗುರುನಾಥ ಕೆ.ದಾನಪ್ಪನವರ್, ಪಡಿಯಪ್ಪ ಹೆಚ್. ಪೂಜಾರ್, ಬಿ.ಆರ್. ಮುನಿರಾಜು, ಸಿದ್ದು ಮೇತ್ರಿ, ಸಾಬು ದೊಡ್ಮನೆ ಸೇರಿದಂತೆ ಮಾದಿಗ ಜಾತಿಗಳ ಪ್ರಮುಖರು, ಯುವಕರು, ಚಿಂತಕರು, ವಿದ್ಯಾರ್ಥಿಗಳು ಹಾಗೂ ಹೋರಾಟಗಾರರು, ವಿವಿಧ ಸಂಘ ಸಂಸ್ಥೆ ಮುಖಂಡರು, ವಿವಿಧ ಪಕ್ಷಗಳ ರಾಜಕೀಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ :
ಪರಶುರಾಮ ಮುದ್ದಾಪುರ, ಮೊ : 8892604340

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...