Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದಲಿತರ ಮೇಲೆ ದೌರ್ಜನ್ಯ ವಿರೋಧಿಸಿ ಮಾದಿಗ ಮಹಾಸಭಾದಿಂದ ಬುಧವಾರ ಜಿಲ್ಲಾಧಿಕಾರಿಗೆ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ಹೊಸದುರ್ಗ ತಾಲ್ಲೂಕಿನ ದೊಡ್ಡಘಟ್ಟ, ಜಂತಿಕೊಳಲು, ಚಳ್ಳಕೆರೆ ತಾಲ್ಲೂಕಿನ ಬೂದಿಹಾಳ್, ದೊಡ್ಡಬೀರನಹಳ್ಳಿ, ಕೋನಿಗರಹಳ್ಳಿ, ಹಿರಿಯೂರು ತಾಲ್ಲೂಕಿನ ಈಶ್ವರಗೆರೆ, ಕಂಬತ್ತಹಳ್ಳಿ ಗ್ರಾಮಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲವು ವರ್ಷಗಳಿಂದ ದಲಿತರ ಮೇಲೆ ದೌರ್ಜನ್ಯ, ಬಹಿಷ್ಕಾರ ನಡೆಯುತ್ತಿದ್ದು, ಸರ್ಕಾರದಿಂದ ಇದುವರೆವಿಗೂ ಯಾವುದೇ ಪರಿಹಾರ ನೀಡಿಲ್ಲದಿರುವುದನ್ನು ವಿರೋಧಿಸಿ ಮಾದಿಗ ಮಹಾಸಭಾದಿಂದ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ದೌರ್ಜನ್ಯಕ್ಕೊಳಗಾದವರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಜಮೀನು ಉಳ್ಳವರಿಗೆ ಕೊಳವೆಬಾವಿಗಳನ್ನು ಕೊರೆಸಿಕೊಡುವಂತೆ ಅನೇಕ ವರ್ಷಗಳಿಂದಲೂ ಹೋರಾಟ ನಡೆಯುತ್ತಿದೆ. ನಿವೇಶನ, ಮನೆ, ಜಮೀನು ಮಂಜೂರು ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಸಂತ್ರಸ್ಥರಿಗೆ ಇಲ್ಲಿಯವರೆಗೂ ಪರಿಹಾರದ ಹಣ ಮಂಜೂರಾಗಿಲ್ಲ. ತಕ್ಷಣವೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಮಾದಿಗ ಮಹಾಸಭಾ ರಾಜ್ಯಾಧ್ಯಕ್ಷ ಹನುಮಂತಪ್ಪ ದುರ್ಗಾ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ದಲಿತರ ಮೇಲೆ ದೌರ್ಜನ್ಯವೆಸಗಿರುವವರಿಗೆ ನ್ಯಾಯಾಲಯ ಬೇಗನೆ ಜಾಮೀನು ನೀಡಬಾರದು. ಕನಿಷ್ಟ ಮೂರು ತಿಂಗಳಾದರೂ ನ್ಯಾಯಾಂಗ ಬಂಧನದಲ್ಲಿರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಅಭಿಯೋಜಕರು ಸಂತ್ರಸ್ಥರ ಪರ ವಾದ ಮಂಡಿಸಬೇಕೆಂದು ವಿನಂತಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...